ತಾಪಂ ಸಹಾಯಕ ನಿರ್ದೇಶಕರಾದ ವೈ. ವನಜಾ ಸಲಹೆ
ಅಕ್ಷರಕ್ರಾಂತಿ ನ್ಯೂಸ್
ಕಾರಟಗಿ,:ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿಯಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳಲು ಅವಕಾಶವಿದ್ದು, ಇದರ ಸದ್ಬಳಕೆ ಮಾಡಿಕೊಳ್ಳಿ ಎಂದು ತಾಪಂ ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕರಾದ ವೈ. ವನಜಾ ಹೇಳಿದರು.
ತಾಲೂಕಿನ ಮರ್ಲಾನಹಳ್ಳಿ ಗ್ರಾ.ಪಂ ನಲ್ಲಿ ನರೇಗಾ ಯೋಜನೆಯ 2024-25ನೇ ಸಾಲಿನ ವೈಯಕ್ತಿಕ ಫಲಾನುಭವಿಗಳಿಗೆ ಆಯೋಜಿಸಿದ್ದ ಕಾಮಗಾರಿ ಆದೇಶ ಪ್ರತಿಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಬಚ್ಚಲು ಗುಂಡಿ, ಕೋಳಿ, ಹಂದಿ ಶೆಡ್ ನಿರ್ಮಾಣಕ್ಕೆ ಅವಕಾಶಗಳಿವೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಬಹುದಾಗಿದ್ದು, ಅರ್ಹ ಫಲಾನುಭವಿಗಳು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಲ್ಮಾಂ ಬೇಗಂ ಮಾತನಾಡಿ, ಫಲಾನುಭವಿಗಳು ನಿಯಮಾವಳಿ ಪ್ರಕಾರ ಶೆಡ್ ನಿರ್ಮಿಸಿಕೊಳ್ಳಬೇಕು. ಶೆಡ್ ಬೇರೆ ಚಟುವಟಿಕೆಗಳಿಗೆ ಬಳಸಿಕೊಂಡರೆ ಯೋಜನೆಯ ಹಣ ವಸೂಲಾತಿ ಮಾಡಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ನಾಗಪ್ಪ ಈರಪ್ಪ ದೇವಪೂರ, ತಾಪಂ ಐಇಸಿ ಸಂಯೋಜಕ ಸೋಮನಾಥ ಗೌಡರ್, ಕಾರ್ಯದರ್ಶಿ ಮಹೆಬೂಬ್, ಬಿಎಫ್ಟಿ ಇಮಾಂಬಿ, ಗ್ರಾಮ ಕಾಯಕ ಮಿತ್ರರಾದ ಉಮಾದೇವಿ, ಗ್ರಾಪಂ ಸಿಬ್ಬಂದಿಗಳಾದ ಕಂಠೇಪ್ಪ, ಮಾಸಪ್ಪ, ಇದ್ದರು.
More Stories