ರಾಜ್ಯ ಸರ್ಕಾರ ಪಟ್ಟಣ ಪಂಚಾಯತಿ ಮೀಸಲಾತಿ ಪ್ರಕಟಣೆ ಗೊಂದಲಗೂಡಾದ ಕುಕನೂರು ಪಟ್ಟಣ ಪಂಚಾಯತಿ
ಕುಕನೂರು,: ಸುಮಾರು ಎರಡು ವರ್ಷಗಳ ವನವಾಸದ ನಂತರ ಚುನಾಯಿತ ಪಟ್ಟಣ ಪಂಚಾಯತಿ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಣೆ ಮಾಡುವ ಮೂಲಕ ಅಧಿಕಾರದ ಅವಕಾಶ ಇದೀಗ ಮಾಡಿಕೊಡುತ್ತಿದೆ.
ರಾಜ್ಯದ 117 ಪಟ್ಟಣ ಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ್ದು, ಅದರಂತೆ ಕುಕನೂರು ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದ್ದು, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಒಲಿದಿದೆ ಇದರಿಂದ ಗೊಂದಲದ ಗೂಡಾಗಿದೆ.
ಸುಮಾರು ಎರಡು ವರ್ಷದ ನಂತರ ಪಟ್ಟಣ ಪಂಚಾಯತಿ ಜನಪ್ರತಿನಿಧಿಗಳ ಆಡಳಿತಕ್ಕೆ ಅವಕಾಶ ಕೂಡಿ ಬಂದಿದೆ.
ಇದುವರೆಗೂ ತಾಲೂಕು ದಂಡಾಧಿಕಾರಿ ಮೇಲಧಿಕಾರದಲ್ಲಿ ಆಡಳಿತ ನಡೆಯುತ್ತಿತ್ತು. ಇನ್ನೂ ಮುಂದೆ ಜನಪ್ರತಿನಿಧಿಗಳ ಆಡಳಿತಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿದೆ.
ಇದರಿಂದಾಗಿ ಅಧ್ಯಕ್ಷ, ಉಪಾಧ್ಯಕ್ಷ ಆಕಾಂಕ್ಷಿಗಳಲ್ಲಿ ರಾಜಕೀಯ ಗರಿಗೆದರಿದೆ ಎನ್ನಬಹುದು.
ವರದಿ: ಪಂಚಯ್ಯ ಹಿರೇಮಠ, ಕುಕನೂರು
More Stories
ದೌರ್ಬಲ್ಯ ತೊರೆದು ಆದಿಕವಿಯಾದ ವಾಲ್ಮೀಕಿ : ಕುಲಪತಿ ಪ್ರೊ.ಬಿ.ಕೆ ರವಿ
ಸ್ಕ್ಯಾನ್ ಮಾಡಿ ನರೇಗಾ ಕಾಮಗಾರಿ ಬೇಡಿಕೆ ಸಲ್ಲಿಸಿ : ವೈಜನಾಥ ಸಾರಂಗಮಠ
ದಸರಾ ನಿಮಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿ