ಅ.21- ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಕೊಪ್ಪಳ ಜಿಲ್ಲಾ ಹಾಗೂ ಕೊಪ್ಪಳ ತಾಲೂಕ ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ. 21 ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ನಗರದ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಜರುಗಲಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಕಳಕನಗೌಡ ಪಾಟೀಲ್ ತಿಳಿಸಿದ್ದಾರೆ.
ರವಿವಾರ ನಗರದ ಪತ್ರಿಕಾ ಭವನ್ ದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಅಖಿಲ ಭಾರತ ವೀರಶೈವ ಲಿಂಗಾಯತ್ ಮಹಾಸಭಾ ಜಿಲ್ಲಾ ಮತ್ತು ಜಿಲ್ಲೆಯ ತಾಲೂಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಏರ್ಪಡಿಸಲಾಗಿದ್ದು ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಮತ್ತು ಸರ್ವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹಿಸಬೇಕೆಂದು ನೂತನ ಜಿಲ್ಲಾ ಅಧ್ಯಕ್ಷರಾದ ಕಳಕನ ಗೌಡ ಪಾಟೀಲ್ ಮನವಿ ಮಾಡಿಕೊಂಡರು.ಸದರಿ ಕಾರ್ಯಕ್ರಮದಲ್ಲಿ ಮಹಾಸಭಾ ದ ರಾಜ್ಯಾಧ್ಯಕ್ಷರಾದ ಶಂಕರ್ ಬಿದರಿ ಅವರು ಪಾಲ್ಗೊಳ್ಳುವ ನೀರಿಕ್ಷೆ ಇದೆ, ಕಾರಣ ಸರ್ವರು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ಕೊಪ್ಪಳ ತಾಲೂಕಾಧ್ಯಕ ನಾಗಭೂಷಣ ಸಾಲಿಮಠ, ಪದಾಧಿಕಾರಿಗಳಾದ ಉಮೇಶ್ ಕೆ, ದೇಸಾಯಿಗೌಡ ಪಾಟೀಲ್ ಶಿವಪುತ್ರಪ್ಪ ಕೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ