December 23, 2024

AKSHARA KRAANTI

AKSHARA KRAANTI




ಆ.15: ನವೀಕರಣಗೊಂಡ ಅಶೋಕ ವೃತ್ತ ಉದ್ಘಾಟನೆ ಕಾರ್ಯಕ್ರಮ

ಕೊಪ್ಪಳ,: ನಗರದ ಅಶೋಕ ವೃತ್ತದಲ್ಲಿ ನೂತನವಾಗಿ ನವೀಕರಣ ಮಾಡಿರುವ ರಾಷ್ಟ್ರ ಲಾಂಛನ ಅಶೋಕ ವೃತ್ತದ ಉದ್ಘಾಟನೆ ಕಾರ್ಯಕ್ರಮವನ್ನು ಆಗಸ್ಟ್ 15ರಂದು ಬೆಳ್ಳಿಗೆ 11ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಿಗಿ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಸಂಸದರಾದ ಕೆ.ರಾಜಶೇಖರ್ ಹಿಟ್ನಾಳ್, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಹಾಗೂ ಕೊಪ್ಪಳ ನಗರಸಭೆ ಸರ್ವ ಸದಸ್ಯರು ಆಗಮಿಸಲಿದ್ದಾರೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!