ಕೊಪ್ಪಳ,: ಎಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲಿರಬೇಕು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಹೇಳಿದರು.
ಗುರುವಾರ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ದ್ವಜಾರೋಹಣ ಮಾಡಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಎಲ್ಲರು ಸಮಾನರು. ಭಾರತ ವಿವಿಧತೆಯಲ್ಲಿ ಏಕತೆಯಿರುವ ದೇಶ. ದೇಶಕ್ಕಾಗಿ ಗಾಂಧೀಜಿ, ಅಂಬೇಡ್ಕರ್ ಹಾಗೂ ಇನ್ನಿತರರು ಸ್ವಾತಂತ್ರಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದರು.
ಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಪಕರಾದ ವಿಠೋಬ ಮಾತನಾಡಿ, ಸ್ವತಂತ್ರ ಭಾರತದಲ್ಲಿ ಸ್ವತಂತ್ರ ಬದಕನ್ನು ಕಾಣುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣ ನಮ್ಮ ಪೂರ್ವಿಕರ ಶ್ರಮ ಮತ್ತು ಹೋರಾಟ ಕಾರಣವಾಗಿದೆ. ನಮಗೆ ಏಕತೆ ಮಂತ್ರವಾಗಬೇಕು ಮೊದಲು ನಾವು ಪರರ ಆಡಳಿತಕ್ಕೆ ಒಳಪಟ್ಟಿದ್ದೇವೆ. ನಾವು ಮೂಲಭೂತ ಹಕ್ಕುಗಳನ್ನು ಅನುಭವಿಸಬೇಕು. ನಮಗೆ ಉತ್ತಮವಾದ ಸಂವಿಧಾನವನ್ನು ಅಂಬೇಡ್ಕರ್ ಅವರು ಕೊಟ್ಟಿದ್ದರೆ. ನಾವು ಎಲ್ಲರೂ ದೇಶಕ್ಕೆ ಶ್ರಮ ಪಡಬೇಕು. ನಮಗೆ ಸಂಹಿಷ್ಣತೆ ಇರಬೇಕು. ಭಾವಕ್ಯೆತೆ ಇರುತ್ತದೆ. ದೇಶದಲ್ಲಿ ಇಂದು ಎಲ್ಲರೂ ಒಗ್ಗಟ್ಟು ಇರಬೇಕು. ಧಾರ್ಮಿಕ ಕಲಹಗಳಿಗೆ ಬಳಿಯಬಾಗರದು ಎಂದರು.
ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಗವಿಸಿದ್ದಪ್ಪ ಮುತ್ತಾಳ ಮಾತನಾಡಿ, ಎಲ್ಲರೂ ರಾಷ್ಟ್ರೀಯ ಮನೋಭಾವನೆ ಬೆಳಿಸಿಕೊಳ್ಳಬೇಕು. ನಮಗೆ ಸಿಕ್ಕಿರುವ ಮುಲಬೂತ ಹಕ್ಕುಗಳನ್ನು ಬಳ್ಸಿಕೊಳ್ಳಬೇಕು. ನಾವು ದೇಶಕ್ಕಾಗಿ ಏನಾದರೂ ಸೇವೆ ಮಾಡಬೇಕು. ನಾವು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಆಗ ಮಾತ್ರ ಸುಭದ್ರ ದೇಶ ಕಟ್ಟಬಹುದು ಎಂದರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನರಸಿಂಹ ಮಾತನಾಡಿದರು. ಡಾ. ಪ್ರದೀಪ್ ಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಡಾ. ಹುಲಿಗೆಮ್ಮ, ಸುಮಿತ್ರಾ, ನಾಗರತ್ನ ತಮ್ಮಿನಾಳ, ಡಾ.ಮಲ್ಲಿಕಾರ್ಜುನ, ಡಾ. ಪ್ರದೀಪ್ ಕುಮಾರ್, ಡಾ. ಅಶೋಕ್ ಕುಮಾರ್, ಅಲ್ಲಾಬಕ್ಷ, ಸೌಮ್ಯ ಹಿರೇಮಠ, ಹನುಮಪ್ಪ, ಹಾಗೂ ಕಾಲೇಜಿನ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ