ಜ್ಞಾನ ಬಂಧು ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ಆಚರಣೆ
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ಗಾಂಧೀಜಿಯವರ ಮಾನವೀಯ ಮೌಲ್ಯಗಳು, ಸರಳತೆ ಹಾಗೂ ಸುವಿಚಾರಗಳನ್ನು ನಮ್ಮೆಲ್ಲರ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಅಂದಾಗಲೇ ನಾವು ಪರಿಪೂರ್ಣರಾಗಲು ಸಾಧ್ಯ ಎಂದು ಜ್ಞಾನ ಬಂಧು ಸಂಸ್ಥೆಯ ಅಧ್ಯಕ್ಷರಾದ ದಾನಪ್ಪ ಕವಲೂರು ಹೇಳಿದರು.
ತಾಲೂಕಿನ ಭಾಗ್ಯನಗರ ಪಟ್ಟಣದ ಜ್ಞಾನ ಬಂಧು ಸಂಸ್ಥೆಯಲ್ಲಿ ಬುಧವಾರ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಶಾಲಾ ಶಿಕ್ಷಕಿ ಶ್ರೀಮತಿ ಪದ್ಮಶ್ರೀ ಮಾತನಾಡಿ, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜೀವನ ಮತ್ತು ಸಾಧನೆಗಳನ್ನು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಹಾಗೂ ಶಿಕ್ಷಕರಿಂದ ಗಾಂಧೀಜಿಯವರ ಪ್ರೇರಿತ ಗೀತೆಯಾದ ‘ರಘುಪತಿ ರಾಘವ ರಾಜಾ ರಾಮ್’ ಭಜನೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಲಿಲಿಯನ್ ಆಂಟೋನಿ ಎಸ್, ಉಪ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಎಸ್.ಎಸ್, ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಜಿ.ಎಸ್., ಸಂಸ್ಥೆಯ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು. ನಂತರ ಸಂಸ್ಥೆಯ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು
ಶಿಕ್ಷಕಿ ಶ್ರೀಮತಿ ಸಾವಿತ್ರಿ ಕೆ.ಬಿ. ನಿರೂಪಿಸಿ, ಶಿಕ್ಷಕಿ ಅಖಿಲಾ ಬೇಗಂ ಸ್ವಾಗತಿಸಿ, ಸಂಗೀತಾ ಹಿರೇಮಠ ವಂದಿಸಿದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ