ಚಿತ್ರದಿಂದ ಸನ್ನಿವೇಶ ಕಟ್ಟಿಕೊಡುವ ಛಾಯಾಗ್ರಾಹಕರು : ಕೆ. ರಾಜಶೇಖರ ಹಿಟ್ನಾಳ್
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ಯಾವುದಾದರೊಂದು ಸನ್ನಿವೇಶವನ್ನು ತಿಳಿಸಬೇಕಾದರೆ ಇತಿಹಾಸಕಾರರು ಪುಸ್ತಕ ಬರೆಯುತ್ತಾರೆ. ಆದರೆ, ಛಾಯಾಗ್ರಾಹಕರು ಒಂದು ಚಿತ್ರದಲ್ಲಿ ಒಂದು ಸನ್ನಿವೇಶವನ್ನು ಕಟ್ಟಿಕೊಡುತ್ತಾರೆ ಎಂದು ಸಂಸದ ಕೆ.ರಾಜಶೇಖರ ಹಿಟ್ನಾಳ ಹೇಳಿದರು.
ರವಿವಾರ ನಗರದ ಶಿವಶಾಂತವೀರ ಮಂಗಲ ಭವನದಲ್ಲಿ ಕೊಪ್ಪಳ ಜಿಲ್ಲಾ ಛಾಯಾಗ್ರಾಹಕರ ಸಂಘದ ವತಿಯಿಂದ ನಡೆದ ಛಾಯಾಗ್ರಾಹಕರ ಸಮಾವೇಶ ಮತ್ತು ಛಾಯಾಗ್ರಾಹಕರ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮೈನಳ್ಳಿ-ಬಿಕನಳ್ಳಿ ಉಜ್ಜಯಿನಿ ಶಾಖಾ ಮಠದ ಶ್ರೀಸಿದ್ಧೇಶ್ವರ ಶಿವಚಾರ್ಯ ಸ್ವಾಮೀಜಿಗಳವರು ಸಾನ್ನಿಧ್ಯ ವಹಿಸಿದ್ದರು.
ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾದ ಶ್ರೀನಿವಾಸ ಗುಪ್ತಾ, ಕೆಡಿಪಿ ಸದಸ್ಯ ರವಿ ಕುರಗೋಡ, ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿಜಯಕುಮಾರ ವಸ್ತ್ರದ್ ಸೇರಿದಂತೆ ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ