ಕೊಪ್ಪಳ-ಭಾಗ್ಯನಗರ,: ಹಲವಾರು ಸ್ವಾತಂತ್ರ್ಯ ಹೋರಾಟಗಾರರ ನಿಸ್ವಾರ್ಥ ಹೋರಾಟದ ಫಲವಾಗಿ ದೊರೆತ ಸ್ವಾತಂತ್ರ್ಯವನ್ನು ದೇಶದ ಅಭಿವೃದ್ಧಿಗಾಗಿ ಬಳಸೋಣ ಎಂದು ಜ್ಞಾನ ಬಂಧು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದಾನಪ್ಪ ಕವಲೂರ ಹೇಳಿದರು.
ಅವರು ಭಾಗ್ಯನಗರದ ಓಜನಳ್ಳಿ ರಸ್ತೆಯಲ್ಲಿರುವ ಜ್ಞಾನ ಬಂಧು ಶಾಲೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣವನ್ನ ನೆರವೇರಿಸಿ ಮಾತನಾಡಿದರು.
ದೇಶ ಸೇವೆಯು ಕೇವಲ ಸೈನಿಕ, ಸ್ವಾತಂತ್ರ್ಯ ಹೋರಾಟಗಾರರಿಗೆ ಸೀಮಿತವಲ್ಲ ಪ್ರತಿಯೊಬ್ಬರ ನಾಗರಿಕರು ತಮ್ಮ ಕರ್ತವ್ಯಗಳನ್ನು ಅರಿತುಕೊಂಡು ಸಮಾಜಕ್ಕೆ ಒಳಿತನ್ನು ಮಾಡುವುದು ಕೂಡ ದೇಶದ ಸೇವೆ ಹಾಗೂ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡಿ, ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸುವುದರಲ್ಲಿ ದೇಶ ಸೇವೆಯನ್ನು ಮಾಡುತ್ತಿವೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಉಪನ್ಯಾಸಕರಾದ ಹಾಗೂ ಹಿರಿಯ ಸಾಹಿತಿಗಳಾದ ಡಿ.ಎಮ್. ಬಡಿಗೇರ ಮಾತನಾಡಿ, ನಮ್ಮ ದೇಶದ ಸ್ವಾತಂತ್ರ್ಯ ಚಳುವಳಿಯು ಸಾಮಾಜಿಕ ಮತ್ತು ಕಾರ್ಮಿಕರ ಪರಿವರ್ತನೆಯನ್ನು ಒಳಗೊಂಡಿತ್ತು. ಸ್ವಾತಂತ್ರ್ಯಕ್ಕಾಗಿ ಅನೇಕರು ಬಲಿದಾನವನ್ನು ಮಾಡಿದ್ದಾರೆ ಹಾಗಾಗಿ ನಾವುಗಳು ಈ ದಿನದ ಮಹತ್ವನ್ನು ಅರಿತುಕೊಂಡು ಇದು ನಮ್ಮ ಪುಣ್ಯದಿನ ಎಂದು ಸ್ಮರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಲಿಲಿಯನ್ ಆಂಟೋನಿ ಎಸ್.ಜಿ. ಮಾತನಾಡಿ, ಮಕ್ಕಳು ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಸರಿಯಾಗಿ ಪಾಲಿಸಬೇಕು ಎಂದರು.
ನಂತರದಲ್ಲಿ ಶಾಲಾ ಮಕ್ಕಳಿಂದ ಸ್ವಾತಂತ್ರ್ಯ ಹೋರಾಟಗಾರರ ಛಧ್ಮವೇಷವನ್ನು ಪ್ರದರ್ಶಿಸಿದರು. ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನಾಚರಣೆಯ ಮಹತ್ವವನ್ನು ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಜಿ.ಎಸ್. ಹಾಗೂ ಉಪ ಪ್ರಾಂಶುಪಾಲರಾದ ಜ್ಯೋತಿ ಎಸ್.ಎಸ್. ಹಾಗೂ ಶಿಕ್ಷಕ ಸಿಬ್ಬಂದಿ ಹಾಜರಿದ್ದರು. ವಿದ್ಯಾರ್ಥಿಗಳು ದೇಶಭಕ್ತಿಗೀತೆಗಳನ್ನು ಪ್ರಸ್ತುತಪಡಿಸಿದರು.
ಶಾಲೆಯ ಶಿಕ್ಷಕಿ ಶ್ರೀಮತಿ ದಿಲ್‍ಶಾದ್ ನಿರೂಪಿಸಿದರು, ಕುಮಾರಿ ಕಾವ್ಯ ಸ್ವಾಗತಿಸಿದರು ಹಾಗೂ ನಾಝ್ ಪರ್ವೀನ್ ವಂದಿಸಿದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ