ಕೊಪ್ಪಳ,: ತಾಲೂಕಿನ ತುಂಗಭದ್ರಾ ಆಣೆಕಟ್ಟಿನ 19ನೇ ಕ್ರಸ್ಟ್ ಗೇಟಿನ ಚೈನ್ ಕಟ್ಟಾಗಿ ಗೇಟ್ ಮೂಲಕ ಅಪಾರ ಪ್ರಮಾಣದ ನೀರು ನದಿಗೆ ಹರಿಯುತ್ತದೆ. ಈ ಘಟನೆ ಶನಿವಾರ ತಡರಾತ್ರಿ ವೇಳೆಗೆ ನಡೆದಿದ್ದು, ಸ್ಥಳಕ್ಕೆ ಮಾಜಿ ಸಚಿವರಾದ ಹಾಲಪ್ಪ ಆಚಾರ್ ಅವರು ಭೇಟಿ ನೀಡಿ ಪರಿಶೀಲಿಸಿದರು.ನಂತರ ಮಾತನಾಡಿದ ಅವರು, ತುಂಗಭದ್ರಾ ಅಣೆಕಟ್ಟಿನಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಗೇಟ್ ಕೊಚ್ಚಿಕೊಂಡು ಹೋಗಿದೆ. ಇನ್ನುಳಿದ ಗೇಟ್‌ಗಳಲ್ಲಿ ಬಿರುಕು ಕಾಣಿಸಿಕೊಂಡಿವೆ. ಈ ಭಾಗದ ಜಿಲ್ಲೆಗಳಾದ ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಹಾಗೂ ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸಂಬಂಧಿಸಿದ ಯೋಜನೆ ಇದಾಗಿದೆ. ಆದರೂ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಜಲಾಶಯ ನಿರ್ವಹಣೆ ಮಾಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇರುತ್ತದೆ. ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಈ ಅವಘಡ ನಡೆದಿದೆ. ಇನ್ನೂ ಸರ್ಕಾರ ತಡಮಾಡದೆ ಮುರಿದ ಗೇಟ್ ಶೀಘ್ರವಾಗಿ ದುರಸ್ತಿಗೊಳಿಸಬೇಕು ಎಂದರು.ಈ ವೇಳೆ ಬಿಜೆಪಿ ಮುಖಂಡರಾದ ಡಾ. ಬಸವರಾಜ ಕ್ಯಾವಟರ್, ಚಂದ್ರಶೇಖರ ಪಾಟೀಲ ಹಲಗೇರಿ, ಗಣೇಶ ಹೊರಟ್ನಾಳ, ಪ್ರದೀಪ ಹಿಟ್ನಾಳ ಸೇರಿದಂತೆ ಇತರರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ