ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಶ್ರೀನಿವಾಸ ಗುಪ್ತಾ ನೇಮಕ
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿ ಮಾಡಿ ಸರಕಾರ ಆದೇಶ ಹೊರಡಿಸಿದೆ. ಹಿರಿಯ ಮುಖಂಡ ಹಾಗೂ ಉದ್ಯಮಿ ಶ್ರೀನಿವಾಸ ಗುಪ್ತಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಮಾಡಲಾಗಿದೆ.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3) (ಎಂ) ರನ್ವಯ ಹಾಗೂ ನಿಯಮ 3(4)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರುಗಳನ್ನಾಗಿ ನೇಮಕ ಮಾಡಿದೆ.
ಸದಸ್ಯರಾಗಿ ಮಾರ್ಕಂಡೇಶ್ವರ ಕಲ್ಲನವರ, ಚನ್ನಬಸಯ್ಯ ವಿರೂಪಾಕ್ಷಯ್ಯ ಚನ್ನೊಡೆಯರಮಠ, ಅಬ್ದುಲ್ ಲತಿಫ್ ಖತೀಬ್ ರಹಿಮ್ಮಿಯಾ, ಶ್ರೀಮತಿ ಕಾಳಮ್ಮ ಶಿವಶರಣಬಸವರಾಜ, ಸರ್ಕಾರದ ಅಧೀನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿ ಮಾಡಿ ಸರಕಾರ ಆದೇಶ ಹೊರಡಿಸಿದೆ.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ