ಕೊಪ್ಪಳ,: ಎಲ್ಲಾ ರೋಗಗಳ ಮೂಲ ಸ್ವಚ್ಛತೆಯಾಗಿದ್ದು, ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದಿನ ಪರಿಸರವನ್ನು ಸ್ವಚ್ಛವಾಗಿಡಬೇಕು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಹಿರೇಬಗನಾಳ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಪಿಡಿಓ ಬೆಟ್ಟದಪ್ಪ ಭೀಮನೂರ್ ಹೇಳಿದರು.
ತಾಲೂಕಿನ ಹಿರೇಬಗನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಧ್ರುವ ಪರಿಸರ ನಿಯಂತ್ರಣ ಸಂಸ್ಥೆ ಕೊಪ್ಪಳ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕೊಪ್ಪಳ ಇವರ ಸಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಪರಿಸರ ದಿನಾಚರಣೆ ಪ್ರಯುಕ್ತ ಸಸಿಯನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಎಸ್ ಡಿ ಎಮ್ ಸಿ ಸಮಿತಿ ಅಧ್ಯಕ್ಷ ಮಂಜುನಾಥ್ ದೇವರಮನೀ ನೆರವೇರಿಸಿ ಮಾತನಾಡಿ, ಪ್ರತಿಯೊಬ್ಬರು ಪರಿಸರ ಕಾಳಜಿ ಮಾಡಬೇಕು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದರು.ಶಾಲಾ ಮುಖ್ಯ ಶಿಕ್ಷಕ ಶರಣಯ್ಯ ಬೆಣಕಲ್ಮಠ ಮಾತನಾಡಿ, ಶಾಲಾ ಮಕ್ಕಳು ಪರಿಸರ ಜೊತೆಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದು ಉತ್ತಮ ನಾಗರಿಕರಾಗಿ ಒಳ್ಳೆಯ ಕಾರ್ಯ ಮಾಡಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.
ಹಿರಿಯ ಪತ್ರಕರ್ತರಾದ ಜಿಎಸ್ ಗೋನಾಳ್ ಎಂ. ಸಾಧಿಕ್ ಅಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಫಕೀರಪ್ಪ ಗೋಟೂರ್, ಗ್ರಾಮ ಪಂಚಾಯಿತಿ ಸದಸ್ಯರಾದ ದೇವರಾಜ್, ನೀಲಮ್ಮ, ಸಹ ಶಿಕ್ಷಕರಾದ ಶೈಲೇಶ್ ಚಂದ್ರ, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಪತ್ರಕರ್ತ ರಾಘವೇಂದ್ರ ಅರಿಕೆರೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಘಟಕ ಸಿದ್ದು ಹಿರೇಮಠ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಸದಸ್ಯರಾದ ತಾಜುದ್ದೀನ್ ಮಖಾನ್ದಾರ್, ಎಂ.ಎನ್ ಕುಂದಗೋಳ ಕೊನೆಯಲ್ಲಿ ವಂದಿಸಿದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ