ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಪುನರ್ ರಚನೆಗೆ ಕ್ರಮ ಕೈಗೊಳ್ಳಿ : ರಾಹುಲ್ ರತ್ನಂ ಪಾಂಡೆಯ
ಕೊಪ್ಪಳ,: ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ಪುನರ್ ರಚನೆ ಮಾಡಿ ನಮೂನೆಗಳನ್ನು ಕಡ್ಡಾಯವಾಗಿ ಜಿಲ್ಲಾ ಪಂಚಾಯತ್ ಕಛೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಗ್ರಾ.ಪಂ ಪಿಡಿಓಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮತ್ತು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ ಹಾಗೂ ವಾಶ್ ಪಿಎಂಯು/ ಎಎಸ್.ಬಿ.ಎಂ-ಜಿ ಇವರ ಸಹಯೋಗದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜುಲೈ 05ರಂದು ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಫೀಲ್ಡ್ ಟೆಸ್ಟ್ ಕಿಟ್ (ಎಫ್.ಟಿ.ಕೆ) ಮತ್ತು ಹೆಚ್2ಎಸ್ ವಿಯಲ್ಸ್ (H2S Vials) ಉಪಯೋಗಿಸಿ ನೀರಿನ ಪರೀಕ್ಷೆಗಳನ್ನು ಕೈಗೊಳ್ಳುವ ಕುರಿತು ಒಂದು ದಿನದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫೀಲ್ಡ್ ಟೆಸ್ಟ್ ಕಿಟ್ ಮೂಲಕ ಪ್ರತಿ ಗ್ರಾಮದಲ್ಲಿ ಕುಡಿಯುವ ನೀರಿನ ಜಲ ಮೂಲಗಳಿಂದ ನೀರನ್ನು ಸಂಗ್ರಹಿಸಿ ಪ್ರತಿ ತಿಂಗಳು ನೀರಿನ ಮಾದರಿಯನ್ನು ಪರೀಕ್ಷಿಸಿ ವರದಿಯನ್ನು WQMIS Portal ನಲ್ಲಿ ಇಂಧೀಕರಿಸಬೇಕು. ಪ್ರತಿ ಗ್ರಾಮದಲ್ಲಿ ನೀರುಗಂಟಿ ಮೂಲಕ ಪೈಪ್ ಲೈನ್ ಹೊಡೆದು ಹೋಗಿದ್ದರೆ ಕೂಡಲೇ ಗುರುತಿಸಿ ಸರಿಪಡಿಸಿ ನೀರು ಸರಬರಾಜು ಮಾಡಬೇಕು. ಗ್ರಾಮಗಳಲ್ಲಿ ಓ.ಹೆಚ್.ಟಿ., ಆರ್.ಓ ಪ್ಲಾಂಟ್, ಮಿನಿ ಟ್ಯಾಂಕ್ ಮತ್ತು ಜಲ ಮೂಲಗಳ ಹತ್ತಿರ ಸ್ವಚ್ಛಗೊಳಿಸುವುದುರ ಜೊತೆಗೆ ಯಾವುದೇ ರೀತಿ ನೀರು ಕಲುಷಿತ ವಾಗದಂತೆ ಮುಂಜಾಗೃತಿ ವಹಿಸಬೇಕು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರ ಸಹಕಾರದಿಂದ ಗ್ರಾಮಗಳಲ್ಲಿ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ 3 ತಿಂಗಳಿಗೊಮ್ಮೆ ಚರ್ಚಿಸಿ ಸಭಾ ನಡವಳಿಯನ್ನು ರಿಜಿಸ್ಟರ್ ಪುಸ್ತಕದಲ್ಲಿ ನಮೂದಿಸಲು ಕ್ರಮ ಕೈಗೊಳ್ಳಬೇಕು ಎಂದು ಪಿಡಿಓಗಳಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡಿದರು.
ಜಿ.ಪಂ ಉಪಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್ ತೊದಲಬಾಗಿ ಮಾತನಾಡಿ, ಜಲ ಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳ ಕುರಿತು ಮಾಹಿತಿ ನೀಡಿ, ಇಂಜಿನಿಯರ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮನ್ವಯದೊಂದಿಗೆ ಗ್ರಾಮಸ್ಥರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸಬೇಕು. ನೀರುನ್ನು ಮಿತವಾಗಿ ಬಳಸಲು ಸಾರ್ವಜನಿಕರಿಗೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ಮೂಲಕ ಮಾಹಿತಿ ನೀಡಬೇಕು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಕ್ಷೇತ್ರ ಪರೀಕ್ಷಾ ಕಿಟ್‌ಗಳನ್ನು ಬಳಸಿಕೊಳ್ಳುವಂತೆ ಪಿಡಿಓಗಳಿಗೆ ಸೂಚನೆ ನೀಡಿದರು. ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ನೀರು ಪರೀಕ್ಷೆ ಪ್ರಯೋಗಾಲಯದ ಸಿಬ್ಬಂದಿಗಳು ನೀರು ಪರೀಕ್ಷೆ ಮಾಡಿಸಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ಮಂಜುನಾಥ, ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶರಣಬಸವ, ಜಿಲ್ಲಾ ಎಂ.ಐ.ಎಸ್ ಸುಮಯ್ಯ ಭಾನು, ಜಿಲ್ಲಾ ಐಇಸಿ ಸಮಾಲೋಚಕರಾದ ಮಾರುತಿ ನಾಯಕರ, ಹೆಚ್.ಆರ್.ಡಿ ಸಮಾಲೋಚಕರಾದ ರಾಮಣ್ಣ ಬಂಡಿಹಾಳ, ಎಸ್.ಹೆಚ್.ಪಿ ಸಮಾಲೋಚಕರಾದ ಹುಡೆದ ಬಸಮ್ಮ ಸೇರಿದಂತೆ ಜಿಲ್ಲೆಯ ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸಮಾಲೋಚಕರುಗಳಾದ, ವಾಶ್ ಪಿಎಂಯು, ಲ್ಯಾಬ್ ಸಿಬ್ಬಂದಿಗಳು, ಡಿ.ಟಿ.ಎಸ್.ಯು ಸಮಾಲೋಚಕರು, ಐ.ಎಸ್.ಆರ್.ಎ ಸಿಬ್ಬಂದಿಗಳು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ