ಕೊಪ್ಪಳ,: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರ ಸೇವಾ ವೃಂದದ ನೌಕರರ ಕ್ರೀಡಾಕೂಟವನ್ನು ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ನಗರಸಭೆಯ ಪೌರಾಯುಕ್ತರಾದ ಗಣಪತಿ ಪಾಟೀಲ್, ನಗರಸಭೆ ಉಪಾಧ್ಯಕ್ಷರಾದ ಅಶ್ವಿನಿ ಗದಗಿನಮಠ, ಕ್ರೀಡಾ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ವಿಠಲ್, ನಗರಸಭೆಯ ಸಹಾಯಕ ಅಭಿಯಂತರರಾದ ಮಧು, ಕಿರಿಯ ಅಭಿಯಂತರರಾದ ಸೋಮಲಿಂಗಪ್ಪ, ಪೌರಕಾರ್ಮಿಕರ ಜಿಲ್ಲಾ ಅಧ್ಯಕ್ಷರಾದ ಅಖ್ತರ್ ಭಾಷಾ, ಪೌರಕಾರ್ಮಿಕರ ರಾಜ್ಯ ಕಾರ್ಯದರ್ಶಿಯಾದ ಲಾಲ್ ಷಾ ಮನಿಯರ್, ಸರ್ಕಾರಿ ಶಾಲೆಗಳ ದೈಹಿಕ ಶಿಕ್ಷಕರು ಕ್ರೀಡಾ ಶಿಕ್ಷಕರು, ಶಿಕ್ಷಕಿಯರು, ನಗರಸಭೆಯ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ಪೌರಕಾರ್ಮಿಕರು, ಕುಡಿಯುವ ನೀರಿನ ವಿಭಾಗದವರು ಮತ್ತು ಅನೇಕರು ಕ್ರೀಡಾ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ