ಕೊಪ್ಪಳ, : ವಿದ್ಯಾರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪಡೆಯುತ್ತಿರಲಿ ಆ ವಿದ್ಯಾರ್ಥಿಗಳು ಪತ್ರಿಕಾ ಲೇಖನಗಳನ್ನು ಬರೆಯುವ ಹವ್ಯಾಸ ಬೆಳಸಿಕೊಳ್ಳವುದರೊಂದಿಗೆ ಜ್ಞಾನ ಸಂಪಾದಿಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಬಿ.ಕೆ.ರವಿ ಹೇಳಿದರು.
ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹಿಂದಿನ ದಿನಗಳಲ್ಲಿ ಪತ್ರಿಕೋದ್ಯಮವು ಕಷ್ಟದ ಕಾಲದಲ್ಲಿ ಇತ್ತು. ಅನೇಕ ಪತ್ರಕರ್ತರಿಗೆ ಅನೇಕ ಸವಾಲಿನ ಜೊತೆಗೆ ಕಷ್ಟಪಡುತ್ತಿದ್ದರೂ, ಆದರೆ ಇಂದಿನ ಆಧುನಿಕ ತಂತ್ರಜ್ಞಾನದಿಂದ ಕನ್ನಡ ಪತ್ರಿಕೋದ್ಯಮ ಹಾಗೂ ಮುದ್ರಣ ಮಾಧ್ಯಮ ವಿಭಿನ್ನ ರೀತಿಯಲ್ಲಿ ಬೆಳೆದು ನಿಂತಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಾಗೂ ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಕನ್ನಡ ಪತ್ರಿಕೋದ್ಯಮವು ಅಪಾರವಾದ ಕೊಡುಗೆ ನೀಡಿದೆ. ಭಾಷಾ, ಚಲನಚಿತ್ರದ ಬೆಳವಣಿಗೆ ಮುದ್ರಣ ಮಾಧ್ಯಮದ ಪಾತ್ರ ಬಹು ದೊಡ್ಡದಾಗಿದೆ. ಪ್ರತಿಯೊಬ್ಬರೂ ಪತ್ರಕರ್ತರಾಗಿ ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಹೋರಾಡಬೇಕು. ವಿದ್ಯಾರ್ಥಿಗಳು ಲೇಖನ, ಕವಿತೆ ಹಾಗೂ ಕಥೆಗಳನ್ನು ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಅಂದಾಗ ನಿಮ್ಮ ಬರವಣಿಗೆಯಿಂದ ನಿಮ್ಮನ್ನು ನೀವು ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಸಿ.ಐ.ಚಲವಾದಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಹಾಗೂ ಬದಲಾವಣೆಗೆ ಪತ್ರಿಕೋದ್ಯಮ ಒಂದು ಭಾಗವಾಗಿದೆ. ಸಮಾಜದ ಆಗು ಹೋಗುಗಳ ಅರಿವಿನ ಬಗೆ ಜನರಿಗೆ ಕಿವಿ ಹಿಂಡಿ ಹೇಳುವ ಹಕ್ಕು ಪತ್ರಿಕೋದ್ಯಮಕ್ಕೆ ಇದೆ. ಸಮಾಜವನ್ನು ಒಳ್ಳೆ ದಾರಿಯಲ್ಲಿ ಸಾಗಲು ಯಾವ ಹಕ್ಕುಗಳಿವೆ ಎಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಿದೆ. ಒಳ್ಳೆ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.
ಛಾಯಾಚಿತ್ರ ಸ್ಪರ್ಧೆ ಹಾಗೂ ಕವನ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕುಲಸಚಿವ ಕೆ.ವಿ.ಪ್ರಸಾದ್, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ರಂಗನಾಥ ಕೋಳೂರು ಹಾಗೂ ಭೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಈರಣ್ಣ ನಿರೂಪಿಸಿ, ಭಾನುಪ್ರಕಾಶ್ ಸ್ವಾಗತಿಸಿ, ವೈಷ್ಣವಿ ಪ್ರಾರ್ಥಿಸಿ, ಶಿವರಾಜ್ ವಂದಿಸಿದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ