ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ಜಿಲ್ಲೆಯಲ್ಲಿ, ಬಹುಜನ ಸಮಾಜ ಪಾರ್ಟಿ ಪಕ್ಷದ ಸಂಘಟನೆ ಬೆಳೆಸುವಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶ್ರಮಿಸಬೇಕು ಎಂದು ಬಿಎಸ್ ಪಿ ರಾಜ್ಯ ಘಟಕದ ಅಧ್ಯಕ್ಷರಾದ ಎಂ. ಕೃಷ್ಣಮೂರ್ತಿ ಹೇಳಿದರು.
ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಕೊಪ್ಪಳ ಜಿಲ್ಲಾ ಘಟಕದ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡುಮಾತನಾಡಿದರು, ಕೊಪ್ಪಳ ನಗರದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಕ್ಷ ಸಂಘಟನೆಗೆ ಮುಂದಾಗಿ ಬರುವ ದಿನಗಳಲ್ಲಿ ಬರಲಿರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತಾಲೂಕ ಪಂಚಾಯಿತಿ ಜಿಲ್ಲಾ ಪಂಚಾಯಿತಿಗೆ ಕಳುಹಿಸಿಕೊಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿ ಮೆಹಬೂಬ್ ಖಾನ್, ಮುಖಂಡರಾದ ಹುಲಿಗೆಶ್ ದೇವರಮನಿ, ಮಹೇಶ್ ತುರುವಿ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಇದೆ ವೇಳೆ ಪಕ್ಷದ ಜಿಲ್ಲಾ ಉಸ್ತುವಾರಿ ಮಹಬೂಬ್ ಖಾನ್ ರವರು ಪಕ್ಷದ ರಾಜ್ಯಾಧ್ಯಕ್ಷರಾದ ಎಂ.ಕೃಷ್ಣಮೂರ್ತಿ ಅವರಿಗೆ ಸನ್ಮಾನಿಸಿ ಆತ್ಮೀಯವಾಗಿ ಕೊಪ್ಪಳ ಜಿಲ್ಲೆಗೆ ಬರಮಾಡಿಕೊಂಡರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ
ಅ. 24 ರಂದು ಒಳ ಮೀಸಲಾತಿ ಜಾರಿ ಮಾಡಿ : ವೈ.ಜಯರಾಜ್