ಬಿಜೆಪಿ ಪಕ್ಷದ ಎಸ್ ಸಿ ಮೊರ್ಚಾದ ಜಿಲ್ಲಾಧ್ಯಕ್ಷ ಕಾಂಗ್ರೆಸ್ ಸೇರ್ಪಡೆ
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ಬಿಜೆಪಿ ಪಕ್ಷದ ಎಸ್ ಸಿ ಮೊರ್ಚಾದ ಜಿಲ್ಲಾಧ್ಯಕ್ಷರಾದ ಸಿದ್ದೇಶ ಪೂಜಾರ ರವರು ಬಿಜೆಪಿ ಪಕ್ಷವನ್ನು ತೊರೆದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ರವರು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ನಂತರ ಅವರು ಮಾತನಾಡಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಹಾಗೂ ಹಿರಿಯರು ಆಗಿದ್ದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ತಪ್ಪಿದ್ದು ಹಾಗೂ ಆತಂರಿಕ ಕಲಹದಿಂದ ಮತ್ತು ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣಕ್ಕೆ ಬೇಸತ್ತು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪತ್ರದ ಮೂಲಕ ಪ್ರಾಥಮಿಕ ಸದಸ್ಯತ್ವ ಮತ್ತು ಎಲ್ಲಾ ಹುದ್ದೆಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ ಎಂದರು.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ನ ಹೊಂದಾಣಿಕೆಯಿಂದ ಕಾರ್ಯಕರ್ತರ ಲ್ಲಿ ಸಮನ್ವಯದ ಕೊರತೆಯಿಂದ ಮತ್ತು ಬಿಜೆಪಿಯಲ್ಲಿನ ಗುಂಪುಗಾರಿಕೆಯಿಂದ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರೆಲ್ಲರಿಗೂ ನಮ್ಮ ಪಕ್ಷ ಬರುವ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡಲಿದೆ. ಯಾರೇ ಪಕ್ಷಕ್ಕೆ ಬಂದರೂ ಗೌರವಯುತವಾಗಿ ಬರಮಾಡಿಕೊಂಡು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಲಹೆ, ಸೂಚನೆ ಪಡೆದು ಮುನ್ನೇಡೆಯುತ್ತೇನೆ. ಎಲ್ಲರೂ ಒಗ್ಗೂಡಿ ಮತದಾರರ ದಾರಿತಪ್ಪಿಸುತ್ತೀರುವ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದರು.
ಈ ವೇಳೆ ಲೋಕಸಭಾ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ, ಮುಖಂಡರಾದ ಜನಾರ್ಧನ ಹುಲಿಗಿ, ಪ್ರಸನ್ನ ಗಡಾದ, ವೀರಣ್ಣ ಗಾಣಿಗೇರ, ವೈಜನಾಥ ದಿವಟರ್, ಪಾಲಾಕ್ಷಪ್ಪ ಗುಂಗಾಡಿ, ವಿರುಪಾಕ್ಷಯ್ಯ ಗದಗಿನಮಠ ಸೇರಿದಂತೆ ಅನೇಕ ಮುಖಂಡರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ