ಕೊಪ್ಪಳದಲ್ಲಿ ಪವಿತ್ರ ರಂಜಾನ್ ಹಬ್ಬ ಆಚರಣೆ
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿ ಭಾಂದವರು ನಗರದ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ ಬಾಗಿಯಾಗಿ ಮಾತನಾಡಿದ ಅವರು, ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ, ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಶುಭಕೋರಿದರು.
ರಂಜಾನ್ ಹಬ್ಬ. ಪ್ರತಿಯೊಬ್ಬ ಮುಸಲ್ಮಾನನಿಗೆ ವರ್ಷದಲ್ಲಿ ಒಂದು ಬಾರಿ ಬರುವ ಅತ್ಯಂತ ದೊಡ್ಡ ಹಬ್ಬ. ಕೇವಲ ಭಾರತದಲ್ಲಿ ಮಾತ್ರವಲ್ಲದೆ ಇಡೀ ವಿಶ್ವದಾದ್ಯಂತ ಇರುವ ಎಲ್ಲಾ ಮುಸ್ಲಿಮರು ಒಂದು ತಿಂಗಳ ಕಾಲ ಕಟ್ಟುನಿಟ್ಟಾಗಿ ಉಪವಾಸವಿದ್ದು, ಅತ್ಯಂತ ಭಯ ಭಕ್ತಿಯಿಂದ ಆಚರಣೆ ಮಾಡುವ ವಿಶಿಷ್ಟ ಹಬ್ಬ. ಈ ಸಮಯದಲ್ಲಿ ದೇವರ ಪ್ರಾರ್ಥನೆ, ಕುರಾನ್ ಓದುವುದು ಮತ್ತು ದಾನ ಧರ್ಮ ಮಾಡುವುದು ಪ್ರಮುಖ ಕಾರ್ಯಗಳಾಗಿರುತ್ತವೆ. ಇಡೀ ದಿನ ಉಪವಾಸ ಇರುವುದರಿಂದ ಮುಸಲ್ಮಾನರ ಮಾನಸಿಕ ಸ್ಥೈರ್ಯ ಬಲಗೊಂಡು ಅವರ ನಂಬಿಕೆಯ ಮೇಲೆ ಕಾರ್ಯೋನ್ಮುಖವಾಗುವಂತಹ ಶಕ್ತಿಯನ್ನು ದೇವರು ದಯಪಾಲಿಸುತ್ತಾನೆ ಎಂಬ ನಂಬಿಕೆಯಿದೆ. ಈ ಸಮಯದಲ್ಲಿ ಬಡವರ ಬಗ್ಗೆ ಕಾಳಜಿ ವಹಿಸಿ ಶ್ರೀಮಂತರು ಅವರಿಗೆ ಅಗತ್ಯವಿರುವ ವಸ್ತ್ರಗಳು, ಆಹಾರ ಸಾಮಗ್ರಿಗಳನ್ನು ದಾನ ಮಾಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜಶೇಖರ ಆಡೂರು, ಅಕ್ಬರ್ ಪಾಷಾ ಪಲ್ಟನ್, ಅಜ್ಮಿಮ್ ಅತ್ತಾರ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ