ಕೊಪ್ಪಳ,: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಡಾ. ಬಸವರಾಜ್ ಕ್ಯಾವಟರ್ ಅವರು ಪಕ್ಷದ ಮುಖಂಡರು ಹಾಗೂ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಹಾಂತೇಶ್ ಪಾಟೀಲ್ ಮೈನಳ್ಳಿ ಅವರನ್ನು ಭೇಟಿಯಾಗಿ ಲೋಕಸಭಾ ಚುನಾವಣೆ ಕುರಿತು ಚರ್ಚಿಸಿದರು.
ಇದೇ ವೇಳೆ ಮಹಾಂತೇಶ್ ಪಾಟೀಲ್ ಅವರು ಮಾತನಾಡಿ, ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಹಾಗೂ ಬಿಜೆಪಿಯ ಪ್ರಭಾವ ಕಂಡು ಬರುತ್ತಿದೆ. ಇದು ಪಕ್ಷದ ಗೆಲುವಿನ ಅಂತರವನ್ನು ಹೆಚ್ಚಿಸುವುದು ನಿಶ್ಚಿತ ಎಂದರು.
ಈ ವೇಳೆ ಪಕ್ಷದ ಮುಖಂಡರಾದ ಅಜಯ ಪಾಟೀಲ, ಗಣೇಶ್ ಹೊರಟ್ನಾಳ, ಮಂಜುನಾಥ, ಅಮರೇಶ, ದೀಪಕ ಸೇರಿದಂತೆ ಇತರರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ