ಕೊಪ್ಪಳ,: ಹಳೇ ಬಂಡಿಹರ್ಲಾಪುರ ಗ್ರಾಮದಲ್ಲಿ ರಾಜ್ಯದ ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಉಸ್ತುವಾರಿ ಸಚಿವರಾದ ಜೆಡ್.ಎಂ. ಜಮೀರ್ ಅಹಮದ್‌ಖಾನ್ ಅವರ ಆಪ್ತ ಕಾರ್ಯದರ್ಶಿ ಸರಪರಾಜ್‌ಖಾನ್ ಮತ್ತು ಅವರ ಎಸ್‌ಓಡಿ ಹಸನ್‌ಸಾಬ್ ಹಾಗೂ ಎಸ್.ಪಿ ಪ್ರದೀಪ್ ಅವರನ್ನು ಕೆಪಿಸಿಸಿ ಸಂಯೋಜಕರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕೆ.ಎಂ. ಸೈಯದ್ ನೇತೃತ್ವದಲ್ಲಿ ಹಳೇ ಬಂಡಿಹರ್ಲಾಪುರ್ ಗ್ರಾಮದ ಮುಸ್ಲಿಂ ಕಮಿಟಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರುಗಳು ಮತ್ತು ಗ್ರಾಮದ ಗುರು ಹಿರಿಯರು ಸನ್ಮಾನಿಸಿ ಗೌರವಿಸಿದರು. ವಿಜಯಪುರ ಹೋಗುವ ಮಾರ್ಗದಲ್ಲಿ ಬಂಡಿಹರ್ಲಾಪುರ ಮಸೀದಿಗೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಮುಸ್ಲಿಂ ಕಮಿಟಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರುಗಳು ಮತ್ತು ಗ್ರಾಮದ ಮುಖಂಡರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ