ಕೊಪ್ಪಳ,: ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ತಪ್ಪಿದ
ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.
ಗುರುವಾರ ನಗರದ ಬಿಜೆಪಿ ಕಾರ್ಯಾಲಯಕ್ಕೆ ಬಂದ ಕಾರ್ಯಕರ್ತರು ಪಕ್ಷದ ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ರಾಜೀನಾಮೆ ನೀಡಿ, ಸಂಸದರಿಗೆ ಆದ ಅನ್ಯಾಯ ಸರಿಪಡಿಸಬೇಕು ಎಂದ ಕಾರ್ಯಕರ್ತರು ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷ ಘೋಷಣೆ ಮಾಡಿರುವ ಅಭ್ಯರ್ಥಿ ಡಾ. ಬಸವರಾಜ ಕೆ. ಪಕ್ಷದಲ್ಲಿ ಯಾರಿಗೂ ಗೊತ್ತಿಲ್ಲ. ಆದರೂ ಟಿಕೆಟ್ ನೀಡಲಾಗಿದೆ. ಸಂಸದ ಸಂಗಣ್ಣ ಕರಡಿ ಅವರ ರಾಜಕೀಯ ಬದುಕು ಅಂತ್ಯಗೊಳಿಸಲು ಎಲ್ಲರೂ ಸೇರಿ ಹುನ್ನಾರ ಮಾಡಿದ್ದಾರೆ. ಪಕ್ಷದಕ್ಕಾಗಿ ದುಡಿದವರಿಗೆ ಟಿಕೆಟ್ ನೀಡಿ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸಂಸದ ಸಂಗಣ್ಣ ಕರಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಗೆ ನನಗೆ ಟಿಕೆಟ್ ಕೈ ತಪ್ಪಿದ್ದರಿಂದ ಸಹಜವಾಗಿ ಕಾರ್ಯಕರ್ತರಿಗೆ ನೋವಾಗಿದ್ದರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರನ್ನು ಸಮಾಧಾನ ಪಡಿಸುವೆ ಎಂದ ಅವರು, ಶುಕ್ರವಾರ ರೈಲ್ವೆ ಸಂಬಂಧಿತ ಕಾರ್ಯಕ್ರಮ ಸಿಂಧನೂರಿನಲ್ಲಿದೆ. ಆ ಕಾರ್ಯಕ್ರಮ ಮುಗಿಯುವ ತನಕ ಯಾವುದರ ಬಗ್ಗೆಯೂ, ಯಾರೊಂದಿಗೂ ಚರ್ಚಿಸುವುದಿಲ್ಲ. ನನಗೆ ಯಾಕೆ ಬಿಜೆಪಿ ಪಕ್ಷದ ಟಿಕೆಟ್ ತಪ್ಪಿತು ಎನ್ನುವುದು ಗೊತ್ತಿಲ್ಲ, ಯಾವ ನಾಯಕರೂ, ಮುಖಂಡರೂ ಟಿಕೆಟ್ ವಿಚಾರವಾಗಿ ಮಾತನಾಡಿಲ್ಲ ಎಂದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧೆ ಮಾಡುತ್ತೀರಾ ಎನ್ನುವ ಪ್ರಶ್ನೆಗೆ, ಆ ಪಕ್ಷದಿಂದ ನನ್ನನ್ನು ಯಾರೂ ಸಂಪರ್ಕಿಸಿಲ್ಲ.ಕಾಂಗ್ರೆಸ್ ಪಕ್ಷದ ಕೆಲ ರಾಜ್ಯ ನಾಯಕರು ಪೋನ್ ಕರೆ ಮಾಡಿ ಮಾತನಾಡಿದ್ದಾರೆ.ಎರಡು ದಿನಗಳ ತನಕ ಯಾವುದರ ಬಗ್ಗೆಯೂ ಮಾತನಾಡಲ್ಲ ಎಂದ ಸುದ್ದಿಗಾರರಿಗೆ ತಿಳಿಸಿದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ