ಶುಭಾಶಯ ವಿನಿಮಯ ಮಾಡಿಕೊಂಡ ರಾಜಕಾರಣಿಗಳು
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ರಂಜಾನ್ ಹಬ್ಬದ ಅಂಗವಾಗಿ ನಗರದಲ್ಲಿ ರಾಜಕಾರಣಿಗಳಾದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ರಾಜಶೇಖರ ಹಿಟ್ನಾಳ, ಅಮರೇಶ ಕರಡಿ ಅವರು ಸೇರಿದಂತೆ ಅನೇಕ ರಾಜಕಾರಣಿಗಳು ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.
ಗುರುವಾರ ದಂದು ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿ, ಸಡಗರ-ಸಂಭ್ರಮದಿಂದ ರಂಜಾನ್ ಹಬ್ಬವನ್ನು ಆಚರಿಸಲಾಯಿತು.
ನಂತರ ಎಲ್ಲರೂ ಜಾತಿ, ಮತ ಮರೆತು ಹಿಂದೂ-ಮುಸ್ಲಿಂ ಬಾಂಧವರು, ಮುಖಂಡರು ಸೌಹಾರ್ದತೆಯ ಮೂಲಕ ಶುಭಾಶಯ ವಿನಿಮಯ ಮಾಡುವುದರ ಜೊತೆಗೆ ನಾವೆಲ್ಲರೂ ಒಂದಾಗಿ ಬಾಳೋಣ ಎಂದು ರಂಜಾನ್ ಹಬ್ಬದ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಸೇರಿದಂತೆ ಅನೇಕ ಮುಖಂಡರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ