December 23, 2024

AKSHARA KRAANTI

AKSHARA KRAANTI




ಸೆ.22 ರಂದು ಮುಖ್ಯಮಂತ್ರಿಗಳಿಂದ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ

ಸೆ.22 ರಂದು ಮುಖ್ಯಮಂತ್ರಿಗಳಿಂದ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ

ಅಕ್ಷರಕ್ರಾಂತಿ ನ್ಯೂಸ್

ಕೊಪ್ಪಳ,: ತುಂಗಭದ್ರಾ ಜಲಾಶಯವು ಭರ್ತಿಯಾಗಿರುವ ಶುಭ ಸಂದರ್ಭದಲ್ಲಿ ಬಾಗಿನ ಸಮರ್ಪಣೆ ಕಾರ್ಯಕ್ರಮವು ಸೆಪ್ಟೆಂಬರ್ 22ರಂದು ಬೆಳಿಗ್ಗೆ 11.15ಕ್ಕೆ ತುಂಗಭದ್ರಾ ಆಣೆಕಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡುವರು. ಭಾರಿ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ, ಕರ್ನಾಟಕ ರಾಜ್ಯ ಕೈಗಾರಿಕ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಹಂಪನಗೌಡ ಬಾದರ್ಲಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರ ಶಾಸಕರಾದ ಜೆ.ಎನ್.ಗಣೇಶ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರು ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರ ಶಾಸಕರಾದ ಆರ್.ಬಸನಗೌಡ ತುರುವಿಹಾಳ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಶಾಸಕರಾದ ಬಸನಗೌಡ ದದ್ದಲ್ ಅವರು ಘನ ಉಪಸ್ಥಿತಿ ವಹಿಸುವರು.
ವಿಜಯನಗರ ವಿಧಾನಸಭಾ ಕ್ಷೇತ್ರ ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಸಂಸದರಾದ ಈ.ತುಕಾರಾಂ, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಯಚೂರು ಸಂಸದರಾದ ಜಿ.ಕುಮಾರ್ ನಾಯಕ, ರಾಜ್ಯಸಭಾ ಸದಸ್ಯರಾದ ಡಾ.ಸೈಯದ್ ನಾಸೀರ್ ಹುಸೇನ್, ಹಗರಿಬೊಮ್ಮನಹಳ್ಳಿ ಶಾಸಕರಾದ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕರಾದ ಡಾ ಶ್ರೀನಿವಾಸ್ ಎನ್.ಟಿ., ಹೂವಿನಹಡಗಲಿ ಶಾಸಕರಾದ ಎಲ್.ಕೃಷ್ಣ ನಾಯಕ, ಹರಪ್ಪನಹಳ್ಳಿ ಶಾಸಕರಾದ ಎಂ.ಪಿ ಲತಾ ಮಲ್ಲಿಕಾರ್ಜುನ್, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಿ.ನಾಗೇಂದ್ರ, ಸಿರಗುಪ್ಪ ಶಾಸಕರಾದ ಬಿ.ಎಂ.ನಾಗರಾಜ, ಬಳ್ಳಾರಿ ನಗರ ಶಾಸಕರಾದ ನಾರಾ ಭರತ್‌ರೆಡ್ಡಿ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ಮಾನ್ವಿ ಶಾಸಕರಾದ ಜಿ.ಹಂಪಯ್ಯ ನಾಯಕ್ ಬಲ್ಲಟಗಿ, ರಾಯಚೂರು ನಗರ ಶಾಸಕರಾದ ಡಾ ಎಸ್.ಶಿವರಾಜ್ ಪಾಟೀಲ್, ದೇವದುರ್ಗ ಶಾಸಕರಾದ ಕರೆಮ್ಮ.ಜಿ ನಾಯಕ, ಲಿಂಗಸೂಗೂರು ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ ನಮೋಶಿ, ವೈ.ಎಂ ಸತೀಶ್, ಹೇಮಲತಾ ಪಿ ನಾಯಕ, ಶರಣಗೌಡ ಎಲ್ ಪಾಟೀಲ್ ಬಯ್ಯಾಪುರ, ಎ.ವಸಂತ ಕುಮಾರ ಹಾಗೂ ಬಸನಗೌಡ ಬಾದರ್ಲಿ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬೀಬ್ ಸಾಬ್ ದೋಟಿಹಾಳ, ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್.ಎನ್.ಎಫ್ ಮಹಮದ್ ಇಮಾಮ್ ನಿಯಾಜಿ, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ್ ಎನ್ ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ವಸತಿ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ರಾಜ್ಯ ಅಬಕಾರಿ ಇಲಾಖೆ ಆಯುಕ್ತರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಜೆ.ರವಿಶಂಕರ್, ಕೃಷ್ಣಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೊಹನ್ ರಾಜ್, ಮಾನ್ಯ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ ಕೆ.ವಿ.ತ್ರಿಲೋಕ್ ಚಂದ್ರ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ವಿಜಯನಗರ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಬಳ್ಳಾರಿ ಜಿಲ್ಲಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ, ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ರಾಯಚೂರು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ ಮೋಹಮ್ಮದ್ ಅಲಿ ಅಕ್ರಮ್ ಷಾ, ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶರಣಪ್ಪ ಸಂಕನೂರ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಾಹುಲ್ ತುಕಾರಾಂ ಪಾಂಡೆ, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್. ಲೋಕೇಶ್ ಕುಮಾರ್, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಶೋಭಾ ರಾಣಿ ವಿ.ಜೆ., ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ ರಾಮ್ ಎಲ್. ಅರಸಿದ್ದಿ, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟನಾದಯ್ಯ ಹಾಗೂ ಎಲ್ಲಾ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಇಂಧನ ಹಾಗೂ ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಬಿ.ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ ಅಮ್ಮನಬಾವಿ, ತುಂಗಭದ್ರಾ ಬೋರ್ಡ್ ಕಾರ್ಯದರ್ಶಿಗಳಾದ ಒ.ಆರ್.ಕೆ. ರೆಡ್ಡಿ, ಕ.ನೀ.ನಿ.ನಿ, ನೀ.ಕೇ.ವ. ಮುನಿರಾಬಾದ್ ಮುಖ್ಯ ಅಭಿಯಂತರರಾದ ಹನುಮಂತ ಜಿ ದಾಸರ, ಮುನಿರಾಬಾದ್ ತುಂಗಭದ್ರ ಯೋಜನ ವೃತ್ತದ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್, ತುಂಗಭದ್ರಾ ಬೋರ್ಡ್ ಅಧೀಕ್ಷಕ ಅಭಿಯಂತರರಾದ ಶ್ರೀಕಾಂತ್ ರೆಡ್ಡಿ, ರಾಯಚೂರು ಜಿಲ್ಲೆಯ ಯರಮರಸ್ ಕ್ಯಾಂಪ್ ತುಂಗಭದ್ರ ಕಾಲುವೆ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಕೆ.ಬಿ.ಹೆಚ್ ಶಿವಶಂಕರ್, ಮುನಿರಾಬಾದ್ ಕ.ನೀ.ನಿ.ನಿ ನಂ.1 ತುಂಗಭದ್ರಾ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಗಿರೀಶ್ ಸಿ ಮೇಟಿ, ತುಂಗಭದ್ರಾ ಬೋರ್ಡ್ ಕಾರ್ಯಪಾಲಕ ಅಭಿಯಂತರರಾದ ಜಿ.ಟಿ. ರವಿಚಂದ್ರ, ಮುನಿರಾಬಾದ್ ಕ.ನೀ.ನಿ.ನಿ ಮುಖ್ಯ ಕಾಮಗಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧರ್ಮರಾಜ ಎಲ್ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!