ಅಯುಷ್ಮಾನ್ ಭಾರತ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ ಕೊಪ್ಪಳ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ಕಿನ್ನಾಳ ಗ್ರಾಮ ಪಂಚಾಯತಿ ಕಾರ್ಯಾಲಯ ಇವರಿಂದ ಅಯುಷ್ಮಾನ್ ಭಾರತ ಕರ್ನಾಟಕ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟಕರಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಕೊಪ್ಪಳದ ಚಂದ್ರಶೇಖರ್, ಸಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಸೇವಾ ಕಾನೂನುಗಳ ಪ್ರಾಧಿಕಾರ, ಕೊಪ್ಪಳದ ಮಹಾಂತೇಶ್ ಏಸ್ ದರಗದ ಆಗಮಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿನ್ನಾಳ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಕರಿಯಮ್ಮ ಉಪ್ಪಾರ್ ಅವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಡಾ.ಶೃತಿ ಜಿಲ್ಲಾ ಸಂಯೋಜಕರು, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ, ಕೊಪ್ಪಳ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ದುರ್ಗಪ್ಪ ರಾಮಪ್ಪ ಡಂಬರ್ ಹಾಗೂ ಸರ್ವ ಸದಸ್ಯರು, ಜಾಫರ್ ಆಧಾರ್ ಜಿಲ್ಲಾ ಸಂಯೋಜಕರು ಕೊಪ್ಪಳ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪರಮೇಶ್ವರಯ್ಯ ತೆಳಗಿನಮಠ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಸದರಿಯವರು ಭಾಗಿಯಾಗಿ ಕಿನ್ನಾಳ ಗ್ರಾಮದ ಸಾರ್ವಜನಿಕರಿಗೆ ಆಯುಷ್ಮಾನ್ ಕಾರ್ಡ್ ಸೌಲಭ್ಯದ ಕುರಿತು ಹಾಗೂ ಆರೋಗ್ಯದ ಕುರಿತು ಆಧಾರ್ ಕಾರ್ಡ್ ನೊಂದಣಿ ಹಾಗು ತಿದ್ದುಪಡೆ ಇತರೆ ಸಮಸ್ಯೆಗಳಿಗೆ ಪರಿಹಾರ ನೀಡುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ