ಗದಗ,: ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಗದಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ವಿಭಾಗ ಜಿಲ್ಲಾ ಪಂಚಾಯತ ಗದಗ ಇವರು ಏರ್ಪಡಿಸಿದ ಗದಗ ಉತ್ಸವ-2024 ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಕಾರ್ಯಕ್ರಮವನ್ನು ಡಾ. ತೋಂಟದಾರ್ಯ ಸಿದ್ಧರಾಮ ಮಹಾಸ್ವಾಮಿಗಳು, ನರಗುಂದ ಶಾಸಕರಾದ ಸಿ.ಸಿ. ಪಾಟೀಲರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿ.ಬಿ. ತೋಟದ ಮಾರಾಟ ಮಳಿಗೆಗೆ ತೋಂಟದಾರ್ಯ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು ಹಾಗೂ ಮಾಜಿ ಸಚಿವರು, ನರಗುಂದ ಕ್ಷೇತ್ರದ ಹಾಲಿ ಶಾಸಕರಾದ ಸಿ.ಸಿ. ಪಾಟೀಲರು ಭೇಟಿ ನೀಡಿ, ಮಾರಾಟ ಮಳಿಗೆಯನ್ನು ರಿಬ್ಬನ್ ಕತ್ತರಿಸುವ ಮುಖಾಂತರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ, ಚೇಂಬರ್ ಆಫ್ ಕಾಮರ್ಸ ಅಧ್ಯಕ್ಷರಾದ ಈಶಣ್ಣ ಮುನವಳ್ಳಿ, ಲಿಂಗರಾಜ ಬಸವರಾಜ ತೋಟದ, ವಿಜಯಕುಮಾರ ಹಿರೇಮಠ, ಚಂದ್ರು ಬಾಳಿಹಳ್ಳಿಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
More Stories
ಪತ್ರಕರ್ತ ರಾಜೀವ ಕಿದಿಯೂರುಗೆ ಸಿರಿಗನ್ನಡ ಸಿರಿ ಪ್ರಶಸ್ತಿ ಪ್ರದಾನ
ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ
ಮಾಜಿ ಸೈನಿಕರಿಂದ ಪಿಎಸ್ಐ ಲಕ್ಷ್ಮಪ್ಪ ಆರಿಗೆ ಸನ್ಮಾನ