ಬಾಲಕಿಯರ ಕಬಡ್ಡಿಯಲ್ಲಿ ಕುರಡಗಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಅಕ್ಷರಕ್ರಾಂತಿ ನ್ಯೂಸ್
ಗದಗ,: ನಗರದ ಸಿ.ಎಸ್. ಪಾಟೀಲ ಬಾಲಕರ ಶಾಲೆಯಲ್ಲಿ ಇತ್ತೀಚಿಗೆ ಆಯೋಜಿಸಿದ್ದ ತಾಲೂಕ ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಬಾಲಕಿಯರ ಕಬಡ್ಡಿ ವಿಭಾಗದಲ್ಲಿ ಎಚ್.ವ್ಹಿ. ಕುರಡಗಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಯಗಳಿಸಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಹಾಗೂ ತರಬೇತಿ ನೀಡಿದ ಶಾಲೆಯ ದೈಹಿಕ ಶಿಕ್ಷಕರಾದ ಸಂತೋಷ ನಾಯಕ ಅವರಿಗೆ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವಾಸಣ್ಣ ಕುರಡಗಿ ಹಾಗೂ ಶಾಲೆಯ ಅಧ್ಯಕ್ಷರಾದ ಡಾ. ಶ್ರೀಧರ ಕುರಡಗಿ ಹಾಗೂ ಮುಖ್ಯೋಪಾಧ್ಯಾಯರಾದ ಕುಬೇರಪ್ಪ ಕಲಾರಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
More Stories
ಪತ್ರಕರ್ತ ರಾಜೀವ ಕಿದಿಯೂರುಗೆ ಸಿರಿಗನ್ನಡ ಸಿರಿ ಪ್ರಶಸ್ತಿ ಪ್ರದಾನ
ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ
ಮಾಜಿ ಸೈನಿಕರಿಂದ ಪಿಎಸ್ಐ ಲಕ್ಷ್ಮಪ್ಪ ಆರಿಗೆ ಸನ್ಮಾನ