ಮೇ 7ರ ಪ್ರಜಾಪ್ರಭುತ್ವ ಹಬ್ಬದಲ್ಲಿ ಹೆಮ್ಮೆಯಿಂದ ಭಾಗವಹಿಸಿ
ಗದಗ,: ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿಬಿ ದೇವರಮನಿ ಹೇಳಿದರು.
ಅವರು ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಕಂದಕ ಬದು ನಿರ್ಮಾಣ ಕಾಮಗಾರಿ ಪರಿಶೀಲನೆ ನೆಡಸಿ ನಂತರ ಗದಗ ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಶೇಷ ಮತದಾನ ಜಾಗೃತಿ ಹಾಗೂ ಮತದಾನ ಪ್ರತಿಜ್ಞಾ ವಿಧಿ ಬೋಧಿನೆ ಮಾಡಿ ಮಾತನಾಡಿದರು.
ಲೋಕಸಭೆ ಚುನಾವಣೆ 2024 ಅಂಗವಾಗಿ ಮತದಾರ ಜಾಗೃತಿ ಮೂಡಿಸಲು ವಿಶೇಷವಾಗಿ ಕಾರ್ಯಕ್ರಮ ಆಯೋಜನೆ ಮಾಡಿರುವುದು ಅತ್ಯಂತ ಖುಷಿಯ ವಿಚಾರವಾಗಿದೆ. ದೇಶ ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯವಾಗಿರುತ್ತದೆ ಯಾರೊಬ್ಬರೂ ಮತದಾನ ಮಾಡಲು ನಿಷ್ಕಾಳಜಿ ತೋರಬಾರದು. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದೆ, ಯಾರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಖುಷಿಯಿಂದ ಮತ ಚಲಾಯಿಸಬೇಕೆಂದು ಹೇಳಿದರು. ಮತಗಟ್ಟೆ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಸ್ವ ವಿಸ್ತಾರವಾಗಿ ಹೇಳುವುದರ ಜೊತೆಗೆ 18 ವರ್ಷ ಮೇಲ್ಪಟ್ಟಂತ ಯುವಕರು, ವೃದ್ಧರು, ವಿಕಲಚೇತನ ಮತದಾರರು ನಿರ್ಭೀತಿಯಿಂದ ಮೇ.7 ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಪ್ರತಿಶತ ನೂರಕ್ಕೆ ನೂರರಷ್ಟು ಮತದಾನ ಮಾಡಿ ಯೋಗ್ಯ ಹಾಗೂ ಸಮರ್ಥ ನಾಯಕರನ್ನು ಆಯ್ಕೆ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ತಾಪಂ ಸಹಾಯಕ ನಿರ್ದೇಶಕ ಕುಮಾರ್ ಪೂಜಾರ್ ಅವರು ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತಕ್ಕೂ ಒಂದೇ ಮೌಲ್ಯ ಇರುತ್ತದೆ. ಯಾರೂ ಕೂಡ ಅಸಡ್ಡೆತನ ತೊರಕೂಡದು. ನಮ್ಮ ಹಕ್ಕನ್ನು ನಾವು ಕಡ್ಡಾಯವಾಗಿ ಚಲಾಯಿಸಬೇಕು ಎಂದು ತಿಳಿಸಿದರು.
ಗಮನಸೆಳೆದ ಅಕ್ಷರ ಮಾಲೆ : ಕಾಮಗಾರಿ ಸ್ಥಳದಲ್ಲಿ ಹಾಜರಿದ್ದ ಕೂಲಿಕಾರರ ಸಹಾಯದಿಂದ ಮೇ. 7 ಎಂದು ಚಿತ್ರ ಬಿಡಿಸಲಾಯಿತು. ನಂತರ ಪ್ರತಿಜ್ಞಾ ವಿಧಿ ಭೋದನೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಕುಮಾರ್ ಪೂಜಾರ್, ಜಿಲ್ಲಾ ಪಂಚಾಯತ್ ನರೇಗಾ ಸಿಬ್ಬಂದಿಗಳಾದ ಎಡಿಪಿಸಿ ಕಿರಣ್ ಕುಮಾರ್ , ಡಿಎಮ್ ಎಸ್ ಮಲ್ಲಿಕಾರ್ಜುನ ಸರ್ವಿ, ಡಿಐಇಸಿ ವಿಬಿ ಸಜ್ಜನ ಹಾಗೂ ತಾಲೂಕು ನರೇಗಾ ಸಿಬ್ಬಂದಿ ಟಿಐಇಸಿ ವಿರೇಶ್, ಬಿಎಫ್ಟಿ ಸೋಮಶೇಖರ್, ಗ್ರಾಕಾ ಮೀ ಗಿರಿಜಾ ಮತ್ತು ನರೇಗಾ ಕೂಲಿಕಾರರು ಇದ್ದರು.
More Stories
ಪತ್ರಕರ್ತ ರಾಜೀವ ಕಿದಿಯೂರುಗೆ ಸಿರಿಗನ್ನಡ ಸಿರಿ ಪ್ರಶಸ್ತಿ ಪ್ರದಾನ
ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ
ಮಾಜಿ ಸೈನಿಕರಿಂದ ಪಿಎಸ್ಐ ಲಕ್ಷ್ಮಪ್ಪ ಆರಿಗೆ ಸನ್ಮಾನ