ಗದಗ,: ನಗರದ ಪ್ರತಿಷ್ಠಿತ ಶಾಲೆಯಾದ ಶ್ರೀಮತಿ. ಶಾಂತಾ ಎಸ್ ಕಂಪಗೌಡ್ರ ಸಿಬಿಎಸ್‍ಇ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಸವಿತಾ ಕಂಪಗೌಡ್ರ, ಶ್ರೀಮತಿ, ಅನುಗುಂಡಗೋವಿ ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಮುದ್ದು ಮಕ್ಕಳು ನೃತ್ಯಮಾಡಿ ಗುರುಗಳಿಗೆ ವಂದಿಸಿದರು. ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಕಂಪಗೌಡ್ರ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೋಹಿಣಿ ಕುಲಕರ್ಣಿ, ಮುಖ್ಯೋಪಾಧ್ಯಾಯರಾದ ಶ್ರೀಧರ ಕಮತರ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕುಮಾರ ಯೂನಸ್ ಡಂಬಳ ನಿರೂಪಿಸಿದನು, ಹತ್ತನೇಯ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು. ಕುಮಾರ ರೇವಂತ ಕೋಟಿ ಸ್ವಾಗತಿಸಿದನು, ಕುಮಾರಿ ಸುಮಯ್ಯಾ ಎಲಿಗಾರ ದಿನದ ಮಹತ್ವವನ್ನು ತಿಳಿಸಿದಳು ಮತ್ತು ಕುಮಾರ ಶ್ರೇಯಸ್ ಮಾಳಶೆಟ್ಟಿ ವಂದಿಸಿದನು. ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲೆಯ ಎಲ್ಲ ಮಕ್ಕಳು ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
More Stories
ಪತ್ರಕರ್ತ ರಾಜೀವ ಕಿದಿಯೂರುಗೆ ಸಿರಿಗನ್ನಡ ಸಿರಿ ಪ್ರಶಸ್ತಿ ಪ್ರದಾನ
ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ
ಮಾಜಿ ಸೈನಿಕರಿಂದ ಪಿಎಸ್ಐ ಲಕ್ಷ್ಮಪ್ಪ ಆರಿಗೆ ಸನ್ಮಾನ