December 23, 2024

AKSHARA KRAANTI

AKSHARA KRAANTI




ಜು.10 : ಶಿಕ್ಷಣ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ,: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಜುಲೈ 10 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಜು.10 ರಂದು ಬೆಳಿಗ್ಗೆ ಬೆಂಗಳೂರಿನಿಂದ ನಿರ್ಗಮಿಸಲಿರುವ ಸಚಿವರು, ರಸ್ತೆ ಮಾರ್ಗವಾಗಿ ಬೆಳಿಗ್ಗೆ 10.30 ಗಂಟೆಗೆ ಜಿಲ್ಲೆಯ ಯಲಬುರ್ಗಾಕ್ಕೆ ಆಗಮಿಸಿ, ಕೋಮಲಾಪುರದ ನೂತನ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30ಕ್ಕೆ ಕರಮುಡಿ ಗ್ರಾಮದ ನೂತನ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 3 ಗಂಟೆಗೆ ದಮ್ಮೂರಿನ ನೂತನ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಬಳಿಕ ಸಚಿವರು ಸಂಜೆ 5 ಗಂಟೆಗೆ ಯಲಬುರ್ಗಾದಿಂದ ರಸ್ತೆ ಮಾರ್ಗವಾಗಿ ಶಿವಮೊಗ್ಗ ಕಡೆಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!