December 22, 2024

AKSHARA KRAANTI

AKSHARA KRAANTI




ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಬೆಂಗಳೂರು : ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಅಧಿವೇಶನದಲ್ಲಿ ಕೊಪ್ಪಳ ಮತಕ್ಷೇತ್ರ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿ ಕುರಿತು ಮಾತನಾಡಿ ಅನುದಾನ ಬಿಡುಗಡೆಗೆ ಮನವಿ ಮಾಡಿದರು.

ಕೊಪ್ಪಳ ವಿಧಾನಸಭ ಕ್ಷೇತ್ರದಲ್ಲಿ ಗ್ರಾಮೀಣ ಹಾಗೂ ಪಂಚಾಯತ್ ರಾಜ್ ಇಲಾಖೆಡಿಯಲ್ಲಿ ಬರುವ ಗ್ರಾಮೀಣ ಪ್ರದೇಶದ ರಸ್ತೆಗಳು ಸತತ ಮಳೆಯಿಂದ ಹಾಳಾಗಿದ್ದು ರಸ್ತೆಗಳ ಅಭಿವೃದ್ಧಿಗೆ ತ್ವರಿತಗತಿಯಲ್ಲಿ ಅನುಧಾನ ಮಾಡಿ ಬಿಡುಗಡೆ ಮಾಡುವಂತೆ ಗ್ರಾಮೀಣ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಮನವಿ ಮಾಡಿದರು.

ನಮ್ಮ ಸರ್ಕಾರ ಬಂದ ನಂತರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಪ್ರಗತಿಪಥ ಯೋಜನೆಯನ್ನು ಜಾರಿ ಮಾಡಿದ್ದು ಈ ಯೋಜನೆಡಿಯಲ್ಲಿ ಆದರೂ ಅನುಧಾನ ಮಂಜೂರು ಮಾಡಿ ಎಂದು ಸಚಿವರಲ್ಲಿ ಬೇಡಿಕೆ ಇಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ಕೊಪ್ಪಳ ಶಾಸಕರ ಮನವಿಯನ್ನು ಸ್ವೀಕಾರ ಮಾಡುತ್ತೇವೆ, ನಮ್ಮ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಯ ಸಲುವಾಗಿ ಪ್ರಗತಿಪಥ ಎಂಬ ಯೋಜನೆಯನ್ನು ಜಾರಿ ಮಾಡಿದ್ದು ಕಳೆದ ಕ್ಯಾಬಿನೆಟ್ ಸಭೆಯಲ್ಲಿ ಈ ಯೋಜನೆಗೆ ಅನುಮೋದನೆ ದೊರೆತಿದ್ದು ಶೀಘ್ರದಲ್ಲಿಯೇ ಈ ಯೋಜನೆಯನ್ನು ಕಾರ್ಯರೂಪಕ್ಕ ತಂದು ಈ ಯೋಜನೆಡಿಯಲ್ಲಿ ಪ್ರತಿ ಕ್ಷೇತ್ರ ಕ್ಕೂ ಪ್ರತಿ ವರ್ಷ 25 ರಿಂದ 30 ಕಿಲೋಮೀಟರ್ ರಸ್ತೆಯ ಅಭಿವೃದ್ಧಿಗೆ ಅನುಧಾನ ನೀಡುತ್ತೇವೆ.ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ ಎಂದು ತಿಳಿಸಿದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!