December 23, 2024

AKSHARA KRAANTI

AKSHARA KRAANTI




ಹಣ್ಣು ಮತ್ತು ಜೇನು ಪ್ರದರ್ಶನ, ಮಾರಾಟ ಮೇಳ : ಹೆಸರು ನೋಂದಣಿಗೆ ಸೂಚನೆ

ಶಿವರಾತ್ರಿ ಪ್ರಯುಕ್ತ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಕರಬೂಜ, ಅಂಜೂರ, ಪೇರಲ, ಜೇನು ಪ್ರದರ್ಶನ

ಕೊಪ್ಪಳ,: ತೋಟಗಾರಿಕೆ ಇಲಾಖೆ ಕೊಪ್ಪಳ ವತಿಯಿಂದ ಶಿವರಾತ್ರಿ ಪ್ರಯುಕ್ತ ಮಾರ್ಚ್ 6 ರಿಂದ 9 ರವರೆಗೆ ಹಣ್ಣು ಮತ್ತ ಜೇನು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸಲು ಆಸಕ್ತ ರೈತರು ಹೆಸರು ನೋಂದಾಯಿಸುವಂತೆ ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.
ರೈತರಿಂದ ನೇರವಾಗಿ ಗ್ರಾಹಕರಿಗೆ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಕರಬೂಜ, ಅಂಜೂರ, ಪೇರಲ, ಜೇನು ಈ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವ ಮತ್ತು ಕೊಪ್ಪಳ ಜಿಲ್ಲೆಯ ನಾಗರಿಕರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಯೋಗ್ಯ ಬೆಲೆಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರಿಂದ ನೇರವಾಗಿ ಗ್ರಾಹಕರಿಗೆ ಒದಗಿಸುವ ಉದ್ದೇಶದಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ಮೇಳದಲ್ಲಿ ಭಾಗವಹಿಸುವ ಜಿಲ್ಲೆಯ ಆಸಕ್ತ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಅಂಜೂರು, ಪೇರಲ ಮತ್ತು ಕರಬೂಜ ಬೆಳೆಗಾರರು ಮುಂಗಡವಾಗಿ ಮಾರಾಟ ಮಳಿಗೆಗಳನ್ನು ಕಾಯ್ದಿರಿಸುವ ಸಲುವಾಗಿ ತಮ್ಮ ಹೆಸರನ್ನು ನೋಂದಾಯಿಸಬೇಕು.
ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು, ಆಸಕ್ತ ರೈತರು ತಮ್ಮ ಪಹಣಿ ಪ್ರತಿಯೊಂದಿಗೆ, ತಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಬೆಳೆ, ತಳಿಗಳು ಹಾಗೂ ವಿಸ್ತೀರ್ಣ ಮುಂತಾದ ವಿವರಗಳೊಂದಿಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು.
ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಸ್ಥಾನಿಕ ಸಹಾಯಕರು, ತೋಟಗಾರಿಕೆ ಉಪನಿರ್ದೇಶಕರ ಕಛೇರಿ (ಜಿಪಂ) ಕೊಪ್ಪಳ. ಮೊ:9741057047, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಕೊಪ್ಪಳ ಮೊ: 9448511649, ಗಂಗಾವತಿ ಮೊ: 9448910277, ಕುಷ್ಟಗಿ ಮೊ:8861697989 ಹಾಗೂ ಯಲಬುರ್ಗಾ ಮೊ: 9945644338 ಇವರನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!