ಕೊಪ್ಪಳ,: ನಗರದ ಭಾಗ್ಯನಗರ ರಸ್ತೆಯಲ್ಲಿರುವ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ ಬಹುತ್ವ ಮೀಡಿಯಾ ಹೌಸ್, ಬಹುತ್ವ ಬಳಗದ ಕೊಪಣ ಮೀಡಿಯಾ ಫೆಸ್ಟ್ ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕಿನ ಶಹಾಪುರ ಗ್ರಾಮದ ಉದ್ಯಮಿ ಹಾಗೂ ಸಮಾಜ ಸೇವಕರಾದ ಗಿರೀಶ ಹಿರೇಮಠ ಅವರು ಭಾವಗೀತೆಯನ್ನು ಹಾಡಿ ಎಲ್ಲರ ಮನ ರಂಜಿಸಿದರು.
ಇಲ್ಲಿನ ಕೊಪ್ಪಳ ವಿಶ್ವವಿದ್ಯಾಲಯ, ಕೊಪ್ಪಳ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ,ಕನ್ನಡ ವಿಶ್ವವಿದ್ಯಾಲಯ, ಹಂಪಿ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ, ಸಾಂಸ್ಕೃತಿಕ ವಿಭಾಗ ಹಾಗೂ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇ ಕೊಪ್ಪಳ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ, ಸರಕಾರಿ ಪ್ರಥಮ ದರ್ಜೆ ಕಾಲೇಜು ಆಳವಂಡಿ ಸ್ನಾತಕೋತ್ತರ ಕೇಂದ್ರ ಕೊಪ್ಪಳ ವಿಶ್ವವಿದ್ಯಾಲಯ, ಗಂಗಾವತಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕನಕಗಿರಿ, ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು,ಹೊಸಪೇಟೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳದ, ಸೇವಾ ಸಂಸ್ಥೆಯಿಂದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಉದ್ಯಮಿ ಗಿರೀಶ್ ಹಿರೇಮಠ ಅವರು ಭಾವಗೀತೆಯನ್ನು ಹಾಡಿ ಎಲ್ಲರ ಗಮನ ಸೆಳೆದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ