ಕೊಪ್ಪಳ,: ನಗರದ ಹೊರವಲಯದಲ್ಲಿರುವ ಐತಿಹಾಸಿಕ ಪ್ರಸಿದ್ಧ ಶ್ರೀ ಮಳೆಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ ರವಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವವು ಜರುಗಿತು.
ರವಿವಾರ ಸಂಜೆ ಗವಿಮಠದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿಗಳವರು ಶ್ರೀ ಮಳೆಮಲ್ಲೇಶ್ವರನ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.
ಮಹಾ ರಥೋತ್ಸವ ಸಾಗುತ್ತಿದ್ದಂತೆಯೇ ಭಕ್ತರು ಶ್ರೀ ಮಳೆಮಲ್ಲೇಶ್ವರ ಮಹಾರಾಜಕೀ ಜೈ ಎನ್ನುವ ಘೋಷಣೆಗಳನ್ನು ಕೂಗಿದರು. ನಗರ ಸೇರಿದಂತೆ ಗ್ರಾಮೀಣ ಭಾಗದಗಳಿಂದ ಆಗಮಿಸಿದ ಭಕ್ತರು ಉತ್ತತ್ತಿ, ಬಾಳೆಹಣ್ಣು ಅರ್ಪಿಸಿದರು.ಬಿಕನಳ್ಳಿ-ಮೈನಳ್ಳಿಯ ಉಜ್ಜಯಿನಿ ಶಾಖಾ ಮಠದ ಶ್ರೀ ಸಿದ್ಧೇಶ್ವರ ಶಿವಚಾರ್ಯ ಸ್ವಾಮೀಜಿ, ಹೂವಿನಹಡಗಲಿ ಗವಿಮಠದ ಶಾಖಾ ಮಠದ ಶ್ರೀ ಹಿರಿಶಾಂತವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ದೇವಸ್ಥಾನ ಸಮಿತಿಯ ಅಧ್ಯಕ್ಷ ಗವಿಸಿದ್ದಯ್ಯ ಲಿಂಗಬಸಯ್ಯನಮಠ, ಉಪಾಧ್ಯಕ್ಷ ಶಿವಣ್ಣ ಕೋಣಂಗಿ, ರಮೇಶ ಕವಲೂರು, ಗವಿಸಿದ್ದಪ್ಪ ಬೆಲ್ಲದ್, ಅಮರ್ ಸಿಂಗ್, ಮಂಜುನಾಥ ಗದಗಿನಮಠ ಸೇರಿದಂತೆ ಅನೇಕ ಭಕ್ತರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ