December 23, 2024

AKSHARA KRAANTI

AKSHARA KRAANTI




ಮಾನವ ಸರಪಳಿ : ನೋಡಲ್ ಅಧಿಕಾರಿಗಳೊಂದಿಗೆ ಸಭೆ

ಕೊಪ್ಪಳ,: ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸಿದ್ಧತೆ ಪರಿಶೀಲಿಸಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಅವರು ಸೆ.13ರಂದು ಸಭೆ ನಡೆಸಿದರು.

ಕೊಪ್ಪಳ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಎಲ್ಲ ನೋಡಲ್ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯಕ್ರಮವು ಸೆ. 15 ರಂದು ಅಚ್ಚುಕಟ್ಟಾಗಿ ನಡೆಯಬೇಕು. ವಿಶೇಷವಾಗಿ ಕಾರ್ಯಕ್ರಮದ ಸಂಬಂಧ ಈಗಾಗಲೇ ನಿಯೋಜಿಸಿದ ನೋಡಲ್ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ದುಂಡಪ್ಪ ತುರಾದಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಜು ತಳವಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಗದೀಶ ಸೇರಿದಂತೆ ಇನ್ನೀತರರು ಇದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!