ಕೊಪ್ಪಳ,: ಕನ್ನಡ ಭಾಷೆ ಸಾಹಿತ್ಯ ಕಲೆ ಧರ್ಮ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿ ಸಾಮಾಜಿಕ ಪರಿವರ್ತನೆಗೆ ಬುನಾದಿ ಹಾಕಿದ ಕಲ್ಯಾಣ ಕರ್ನಾಟಕದ ಪವಿತ್ರ ಭೂಮಿ ನಮ್ಮದು ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು,
ಮಂಗಳವಾರ ನಗರಸಭೆ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ಪ್ರಯುಕ್ತ ನಗರಸಭೆ ಏರ್ಪಡಿಸಿದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಇತಿಹಾಸ ಬಲ್ಲವರು ಇತಿಹಾಸ ನಿರ್ಮಿಸಬಲ್ಲರು ಎಂಬಂತೆ ಈ ಪ್ರದೇಶದಲ್ಲಿ ಮಹಾನ್ ಮಾನವತವಾದಿ ಬಸವಣ್ಣ ನವರು ಅಪಾರ ಕೊಡುಗೆ ನೀಡಿದ್ದಾರೆ. ಈ ಭೂಮಿ ಪುಣ್ಯದ ನಾಡು, ಇಲ್ಲಿ ವಾಸಿಸುವ ನಾವೇ ಪುಣ್ಯವಂತರು, 1947 ಆಗಸ್ಟ್ 15 ರಂದು ನಮ್ಮ ಭಾರತ ದೇಶ ಸ್ವಾತಂತ್ರಗೊಂಡರೂ, ಈ ಭಾಗ ನಿಜಾಮನ ಕಪಿಮುಷ್ಠಿಯಲ್ಲಿದ್ದ ಹೈದರಾಬಾದ್ ಕರ್ನಾಟಕ ಪ್ರದೇಶ ಸೆಪ್ಟೆಂಬರ್ 17 1948 ರಂದು ವಿಮೋಚನೆಗೊಂಡಿತು. ಅಂದಿನ ಗೃಹ ಮಂತ್ರಿ ಸರ್ದಾರ್ ವಲ್ಲಭಾಯಿ ಪಟೇಲ್ ರವರ ಧಿಟ್ಟ ಕ್ರಮದಿಂದ ಹಾಗೂ ಈ ಭಾಗದ ಸ್ವತಂತ್ರ ಹೋರಾಟಗಾರರ ಸತತ ಪ್ರಯತ್ನ ಹೋರಾಟ ಮತ್ತು ಬಲಿದಾನದಿಂದ ನಮಗೆ ಸ್ವತಂತ್ರ ಸಿಕ್ಕಿದೆ. ಅವರೆಲ್ಲರ ಸ್ಮರಣೆ ನಮ್ಮೆಲ್ಲರ ಜವಾಬ್ದಾರಿ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಪರಸ್ಪರ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಿಕೊಂಡು ಜೀವನ ಸಾಗಿಸಬೇಕು ಎಂದರು.ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷರಾದ ಅಶ್ವಿನಿ ಗದಗಿನಮಠ, ಪೌರಾಯುಕ್ತರಾದ ಗಣಪತಿ ಪಾಟೀಲ ಸೇರಿದಂತೆ ನಗರಸಭೆಯ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ