December 23, 2024

AKSHARA KRAANTI

AKSHARA KRAANTI




ಶ್ರೀರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ

ಶ್ರೀರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದ ಸಿಎಂ

Seeking out the best swiss made replica watches options?Click here to explore reputable vendors.

ಅಕ್ಷರಕ್ರಾಂತಿ ನ್ಯೂಸ್

ಬೆಳಗಾವಿ -ಸವದತ್ತಿ,: ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು.ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕ್ಷೇತ್ರದ ಶಾಸಕರಾದ ವಿಶ್ವಾಸ್ ವ ವೈದ್ಯ ಮತ್ತು ಜಿಲ್ಲೆಯ ಶಾಸಕರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!