ವಾಲ್ಮೀಕಿ ಜಯಂತಿ : ಸಾಹಿತ್ಯ ಗೊಂಡಬಾಳಗೆ ಸನ್ಮಾನ
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ಜಿಲ್ಲೆಯಲ್ಲಿ ಮೊದಲ ಬಾರಿಗೆ ದಸರಾ ಸಿಎಂ ಕಪ್ ರಾಜ್ಯಮಟ್ಟದ ನೆಟ್‍ಬಾಲ್ ಸ್ಪರ್ಧೆಯಲ್ಲಿ ಕಂಚು ಪಡೆದ ನಿಮಿತ್ಯ ಸಾಹಿತ್ಯ ಮಂಜುನಾಥ ಗೊಂಡಬಾಳರನ್ನು ಜಿಲ್ಲಾಮಟ್ಟದ ವಾಲ್ಮೀಕಿ ಜಯಂತಿಯಲ್ಲಿ ಸನ್ಮಾನಿಸಲಾಯಿತು.
ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಜಿಲ್ಲಾಮಟ್ಟದ ವಾಲ್ಮೀಕಿ ಜಯಂತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಸನ್ಮಾನಿಸಿ ಗೌರವಿಸಿ ಜಿಲ್ಲೆಯಲ್ಲಿ ಕ್ರೀಡಾ ಸಾಮಥ್ರ್ಯ ಇನ್ನಷ್ಟು ವೃದ್ಧಿಯಾಗಲಿ, ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಲಾಗುವದು ಎಂದರು.ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್. ಅರಸಿದ್ದಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತಹಶೀಲ್ದಾರ ವಿಠ್ಠಲ್ ಚೌಗಲೆ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರಪಾಶಾ ಪಲ್ಟನ್, ಪೌರಾಯುಕ್ತ ಗಣೇಶ ಪಾಟೀಲ್, ಸದಸ್ಯರಾದ ವಿರೂಪಾಕ್ಷಪ್ಪ ಮೊರನಾಳ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜು ತಳವಾರ, ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಪ್ರಭುರಾಜ್ ನಾಯಕ, ಸಮಾಜದ ಜಿಲ್ಲಾಧ್ಯಕ್ಷ ಕೆ.ಎನ್.ಪಾಟೀಲ, ಮುಖಂಡರಾದ ರಾಮಣ್ಣ ಕಲ್ಲನವರ, ಸುರೇಶ್ ಡೊಣ್ಣಿ, ರಾಮಣ್ಣ ಚೌಡ್ಕಿ, ಶರಣಪ್ಪ ನಾಯಕ್, ಜ್ಯೋತಿ ಎಂ. ಗೊಂಡಬಾಳ ಅನೇಕರು ಉಪಸ್ಥಿತರಿದ್ದರು.
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ