ಕೊಪ್ಪಳ,: ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ತಮ್ಮ ಮಗನಿಗೆ ಟಿಕೆಟ್ ತಪ್ಪಿದೆ ಎಂದಾಕ್ಷಣ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಟೀಕಿಸುತ್ತಿರುವುದು ಖಂಡನೀಯ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಅವರು ನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಬಿಜೆಪಿ ಪಕ್ಷ ಅಪ್ಪ ಮಕ್ಕಳ ಪಕ್ಷ, ಟಿಕೆಟ್ ತಪ್ಪಲು ಬಿಎಸ್ ಯಡಿಯೂರಪ್ಪ ಕಾರಣ ಎನ್ನುತ್ತಾರೆ. ಹೈಕಮಾಂಡ್ ಸೂಚನೆಯ ಮೇರೆಗೆ ಟಿಕೆಟ್ ಹಂಚಿಕೆಯಾಗಿದೆ. ಪಕ್ಷದ ವರಿಷ್ಠರು ಟಿಕೆಟ್ ಹಂಚಿಕೆ ಮಾಡಿದ್ದಾರೆ. ತಮಗೆ ಟಿಕೆಟ್ ತಪ್ಪಲು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರೇ ಕಾರಣ ಎಂದು ದೂರುವುದು ಮತ್ತು ಅವರ ಕುರಿತು ಇಲ್ಲದ ಸಲ್ಲದು ಮಾತನಾಡುವುದು ಸರಿಯಲ್ಲ. ಕೆಎಸ್ ಈಶ್ವರಪ್ಪ ಅವರಿಗೆ ಅನ್ಯಾಯವಾಗಿದ್ದರೆ ಹೈಕಮಾಂಡ್ ಮೂಲಕ ಸರಿಪಡಿಸಿಕೊಳ್ಳಬೇಕು. ಯಡಿಯೂರಪ್ಪ ಅವರ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ ಎಂದರು.
ಕೆಎಸ್ ಈಶ್ವರಪ್ಪ ಅವರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಮಗನಿಗೆ ಟಿಕೆಟ್ ನೀಡಿಲ್ಲ ಎಂದ ಕಾರಣಕ್ಕೆ ಬಂಡಾಯವಾಗಿ ಸ್ಪರ್ಧೆ ಮಾಡುವುದು ಸರಿಯಲ್ಲ. ಪಕ್ಷದ ಅಭ್ಯರ್ಥಿ ರಾಘವೇಂದ್ರ ಅವರ ವಿರುದ್ಧ ಸ್ಪರ್ಧೆ ಮಾಡಬಾರದು. ಮುಂದಿನ ದಿನಗಳಲ್ಲಿ ನಿಮಗೆ ಪಕ್ಷ ಸೂಕ್ತ ಸ್ಥಾನ ಮಾನಗಳನ್ನು ನೀಡಬಹುದು. ಈಗ ಪಕ್ಷದ ಅಭ್ಯರ್ಥಿ ಪರ ಗೆಲುವಿಗಾಗಿ ಶ್ರಮಿಸಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್, ವಕ್ತಾರಾದ ಮಹೇಶ ಹಾದಿಮನಿ, ಅಮಿತ ಕಂಪ್ಲಿಕರ
ಮುಖಂಡರಾದ ಡಿ.ಮಲ್ಲಣ್ಣ ಸೇರಿದಂತೆ ಅನೇಕರು ಇದ್ದರು
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ