ಅಬಕಾರಿ ಇಲಾಖೆಯಿಂದ ಒಟ್ಟು 50 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ
ಅಕ್ಷರಕ್ರಾಂತಿ ನ್ಯೂಸ್
ಕೊಪ್ಪಳ,: ಲೋಕಸಭಾ ಚುನಾವಣೆ-2024 ರ ಸಂಬಂಧ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಏಪ್ರಿಲ್ 09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು ರೂ. 50,61,464 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತರಾದ ಬಿ.ಆರ್.ಹಿರೇಮಠ್ ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16 ರಿಂದ ಏ.09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 196 ದಾಳಿಗಳನ್ನು ನಡೆಸಲಾಗಿದ್ದು, 147 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಗೆ ಸಂಬAಧಿಸಿದAತೆ 127 ಜನರನ್ನು ಬಂಧಿಸಲಾಗಿದೆ. ಪ್ರಕರಣಗಳಲ್ಲಿ 4286.190 ಲೀ. ಮದ್ಯದ ಜೊತೆಗೆ 1 ಲಾರಿ, 1 ಒಮಿನಿ ವ್ಯಾನ್ ಹಾಗೂ 23 ದ್ವಿಚಕ್ರ ವಾಹನಗಳು ಸೇರಿದಂತೆ 25 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತು ಮಾಡಲಾದ ವಸ್ತುಗಳ ಒಟ್ಟು ಮೌಲ್ಯ ರೂ. 50,61,464 ಆಗಿದ್ದು, ಚುನಾವಣಾ ಅಕ್ರಮ ತಡೆಯುವ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ನಿರಂತರ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅಬಕಾರಿ ಉಪ ಆಯುಕ್ತರಾದ ಬಿ.ಆರ್.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
More Stories
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು
ಬಿಎಸ್ ಪಿ ಸಂಘಟನೆ ಬೆಳೆಸಲು ಶ್ರಮಿಸಿ : ಕೃಷ್ಣಮೂರ್ತಿ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ : ಕೆ.ರಾಜಶೇಖರ ಹಿಟ್ನಾಳ